ರಾಮೇಶ್ವರಂ ಕೆಫೆಯ ಬಂಡವಾಳ ಬಯಲು – ಹುಳದ ಆಹಾರ ಕೊಟ್ಟು, ಕೇಸ್ ಹಾಕಿದವರಿಗೆ ಬಿಗ್ ಶಾಕ್

ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಅವರ್ ಮಾಡಿದ್ದೇ ದರ್ಬಾರ್ ಆಗಿದೆ. ಹಣದ ಆಹಂ ನಿಂದ ನಾವ್ ಏನ್ ಕೋಟ್ರು ಜನ ತಿಂತಾರೆ ಅನ್ನೋರಿಗೆ ಬಿಗ್ ಶಾಕ್ ಎದುರಾಗಿದೆ. ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಬಂಡವಾಳ ಈಗ ಬಯಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕೆಫೆಯ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಗ್ರಾಹಕ ನಿಖಿಲ್ ಅನ್ನೋರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಕೆಫೆಯ ಮಾಲೀಕ ರಾಘವೇಂದ್ರ ರಾವ್, ಅವರ ಪತ್ನಿ ದಿವ್ಯಾ ರಾಘವೇಂದ್ರ ರಾವ್ ಮತ್ತು ಹಿರಿಯ ವ್ಯವಸ್ಥಾಪಕ ಸುಮಂತ್ ಲಕ್ಷ್ಮಿನಾರಾಯಣ್ ಅವರ ವಿರುದ್ಧ ದೂರು ದಾಖಲಾಗಿದ್ದು, ನವೆಂಬರ್ 29 ರಂದು ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮೇಶ್ವರ ಕೆಫೆಯಲ್ಲಿ ಆಗಿದ್ದೇನು?
ದೂರುದಾರ ನಿಖಿಲ್ ಅವರು ಜುಲೈ 24 ರಂದು ಟರ್ಮಿನಲ್ 1 ರಲ್ಲಿ ಗುವಾಹಟಿಗೆ ತೆರಳಲು ತಯಾರಿ ನಡೆಸುತ್ತಿದ್ದಾಗ ಕೆಫೆಯ ವಿಮಾನ ನಿಲ್ದಾಣದ ಕೌಂಟರ್‌ನಲ್ಲಿ ‘ಪೊಂಗಲ್’ ಮತ್ತು ಫಿಲ್ಟರ್ ಕಾಫಿ ಆರ್ಡರ್ ಮಾಡಿದ್ದರು. ಪೊಂಗಲ್ನಲ್ಲಿ ಹುಳ ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದರು. ಹೋಟೆಲ್ ಸಿಬ್ಬಂದಿಗೆ ತಕ್ಷಣ ಮಾಹಿತಿ ನೀಡಿದ್ದೆ, ಅವರು ಬದಲಿ ಆಹಾರ ನೀಡುವುದಾಗಿ ತಿಳಿಸಿದರು. ಆದರೆ ಬೋರ್ಡಿಂಗ್‌ಗೆ ಆತುರ ಇದ್ದುದರಿಂದ ನಿರಾಕರಿಸಿದ್ದೆ ಎಂದು ನಿಖಿಲ್ ಹೇಳಿದ್ದಾರೆ. ಆದರೆ, ಇತರ ಇತರ ಗ್ರಾಹಕರು ಚಿತ್ರ, ವಿಡಿಯೋ ತೆಗೆದುಕೊಂಡಿದ್ದರು ಎಂದು ವರದಿಯಾಗಿದೆ. ಮತ್ತು ನಿಖಿಲ್ ಯಾವುದೇ ಸಮಸ್ಯೆ ಉಂಟುಮಾಡದೆ ಸುಮ್ಮನೆ ಹೊರಟುಹೋಗಿದ್ದರು.
ಇದನ್ನೂ ಓದಿ : ಶ್ರೀಲಂಕಾಕ್ಕೆ ಎಕ್ಸ್‌ಪೈರಿ ಆದ ಕಿಟ್ ಕಳುಹಿಸಿ ಪಾಕ್ – ವಿಶ್ವದ ಮುಂದೆ ನೀಚ ಕೃತ್ಯ ಬಯಲು
ಆದರೆ ಬೇರೆಯವರು ಮಾಡಿದ್ದ ವಿಡಿಯೋದಿಂದ ಆಹಾರದಲ್ಲಿ ಹುಳ ಸಿಕ್ಕಿರೋ ಸುದ್ದಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಹೋಟೆಲ್ನವರು ನಿಖಿಲ್ ವಿರುದ್ಧ, ಬ್ರಾಂಡ್ ಹೆಸರಿಗೆ ಕಳಂಕ ತರುವುದಾಗಿ ಬೆದರಿಕೆಯೊಡ್ಡಿದ್ದಾಗಿಯೂ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ದೂರು ನೀಡಿದ್ರು. ಕೆಫೆಯ ಆರೋಪಗಳ ಆಧಾರದ ಮೇಲೆ ಪೊಲೀಸರು ನಿಖಿಲ್ ಮತ್ತು ಅವರ ಸ್ನೇಹಿತರನ್ನು ವಿಚಾರಣೆಗೆ ಕರೆಸಿದ್ದರು. ಆದರೆ ನಿಖಿಲ್ ತಾನು ಎಂದಿಗೂ ಪರಿಹಾರ ಅಥವಾ ಮರುಪಾವತಿ ಕೇಳಿಲ್ಲ ಎಂದಿದ್ದಾರೆ. ಕೆಫೆ ಮಾಡಿರುವ ಆರೋಪಗಳಿಗೂ ತನಗೂ ಸಂಬಂಧ ಇಲ್ಲ. ಆ ಹೊತ್ತಿನಲ್ಲಿ ವಿಮಾನದಲ್ಲಿದ್ದೆ ಎಂದು ದಾಖಲೆಗಳನ್ನು ತೋರಿಸಿದ್ದರು. ನಂತರ ನಿಖೀಲ್ ಆಗಲೀ ಅವರ ಸ್ನೇಹಿತರಾಗಲೀ ಬ್ಲ್ಯಾಕ್‌ಮೇಲ್ ಅಥವಾ ಸುಲಿಗೆ ಮಾಡಲು ಪ್ರಯತ್ನಿಸಿದ ಬಗ್ಗೆ ಯಾವುದೇ ಪುರಾವೆಗಳು ತನಿಖಾಧಿಕಾರಿಗಳಿಗೆ ದೊರೆತಿಲ್ಲ.
ಆದರೆ ಇಷ್ಟೆಲ್ಲ ಆದ ಮೇಲೆ ನಿಖಿಲ್ ಸುಮ್ಮನಿರಲಿಲ್ಲ. ಪ್ರತಿದೂರು ದಾಖಲಿಸಿ, ಈ ಘಟನೆಯನ್ನು ‘ಗಂಭೀರ ಆಹಾರ ಸುರಕ್ಷತೆಯ ವೈಫಲ್ಯ ಎಂದು ಉಲ್ಲೇಖಿಸಿದ್ದಾರೆ. ಅಲ್ಲದೆ, ಕೆಫೆಯು ತನ್ನ ವರ್ಚಸ್ಸಿಗೆ ಕಳಂಕ ತರುವ ಮತ್ತು ತನ್ನನ್ನು ಬೆದರಿಸುವ ಸಲುವಾಗಿ ಸುಳ್ಳು ಪ್ರಕರಣವನ್ನು ದಾಖಲಿಸಿದೆ ಎಂದು ಆರೋಪಿಸಿದ್ದಾರೆ. ಈ ದೂರಿನ ಅನ್ವಯ ಕೆಫೆಯ ಮಾಲೀಕರು ಮತ್ತು ಅವರ ಪ್ರತಿನಿಧಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕ್ರಿಮಿನಲ್ ಪಿತೂರಿ, ಸುಳ್ಳು ಮಾಹಿತಿ ಒದಗಿಸುವುದು, ಸಾಕ್ಷ್ಯಗಳನ್ನು ರೂಪಿಸುವುದು ಮತ್ತು ಕಲಬೆರಕೆ ಅಥವಾ ಹಾನಿಕಾರಕ ಆಹಾರವನ್ನು ಮಾರಾಟ ಮಾಡುವುದು ಸೇರಿದಂತೆ ಹವಲು ಆರೋಪಗಳನ್ನು ಕೆಫೆ ವಿರುದ್ಧ ಹೊರಿಸಲಾಗಿದೆ.

ನೋಡಿರಿ

