ಮುಡಾ ಕೇಸ್‌ ನಲ್ಲಿ ಸಿಎಂ ವಿರುದ್ಧ ದಾಖಲಾಗುತ್ತಾ ಎಫ್‌ಐಆರ್? – ಯಾವ್ಯಾವ ಸೆಕ್ಷನ್ ಮೇಲೆ ಕೇಸ್?

ಮುಡಾ ಕೇಸ್‌ ನಲ್ಲಿ ಸಿಎಂ ವಿರುದ್ಧ ದಾಖಲಾಗುತ್ತಾ ಎಫ್‌ಐಆರ್? – ಯಾವ್ಯಾವ ಸೆಕ್ಷನ್ ಮೇಲೆ ಕೇಸ್?

ಮುಡಾ ನಿವೇಶನ ಹಂಚಿಕೆ ಪ್ರಕರಣ ಈಗ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸಿದೆ. ಇದೀಗ ಈ ಕೇಸ್‌ ಸಂಬಂಧ ಕಾನೂನು ಹೋರಾಟ ಮಾಡುವಂತೆ ಆಗಿದೆ.  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತದಲ್ಲಿ ಗುರುವಾರವೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಪವಾಡ ಹುಡುಗ ಪಂತ್ – ರಿಷಭ್ ಗೆಲ್ಲಿಸಿದ್ದೇ ಗಟ್ಟಿ ಗುಂಡಿಗೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಈಗಾಗಲೇ ಮೈಸೂರು ಲೋಕಾಯುಕ್ತಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ. ಸಿಎಂ ಮೇಲೆ ಯಾವ ಯಾವ ಸೆಕ್ಷನ್ ಅಡಿ ಕೇಸ್ ದಾಖಲಾಗಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

  • ಭ್ರಷ್ಟಾಚಾರ ತಡೆ ಕಾಯ್ದೆ 1988
  • ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988
  • ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲು
  • ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ
  • ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು
  • ಸೆಕ್ಷನ್ 403 ಆಸ್ತಿಯ ದುರ್ಬಳಕೆ
  • ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ
  • ಸೆಕ್ಷನ್ 420 ವಂಚನೆ
  • ಸೆಕ್ಷನ್ 426 ದುಷ್ಕೃತ್ಯವೆಸಗುವುದು
  • ಸೆಕ್ಷನ್ 465 ಫೋರ್ಜರಿ
  • ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಫೋರ್ಜರಿ
  • ಸೆಕ್ಷನ್ 340 ಅಕ್ರಮ ಬಂಧನ
  • ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು

ಪ್ರಕರಣದಲ್ಲಿ ಸಿದ್ದರಾಮಯ್ಯ ಎ1, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, ಬಾಮೈದ ಎ3 ಆರೋಪಿಗಳಾಗುವ ಸಾಧ್ಯತೆ ಇದೆ.

Shwetha M