ಭೀಕರ ಅಗ್ನಿ ದುರಂತದಲ್ಲಿ 63 ಮಂದಿ ಸಾವು – 45 ಕ್ಕೂ ಹೆಚ್ಚು ಮಂದಿಗೆ ಗಾಯ

ಭೀಕರ ಅಗ್ನಿ ದುರಂತದಲ್ಲಿ 63 ಮಂದಿ ಸಾವು – 45 ಕ್ಕೂ ಹೆಚ್ಚು ಮಂದಿಗೆ ಗಾಯ

ಬಹುಮಹಡಿಯ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 63 ಮಂದಿ ಸಾವನ್ನಪ್ಪಿದ್ದು, 45 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ    ದಕ್ಷಿಣ ಆಫ್ರಿಕಾದ ಮಧ್ಯ ಜೋಹಾನ್ಸ್‌ಬರ್ಗ್‌ನಲ್ಲಿ ಸಂಭವಿಸಿದೆ.

ಗುರುವಾರ ಮುಂಜಾನೆ ಬಹುಮಹಡಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 63 ಮಂದಿ ಸಾವನ್ನಪ್ಪಿದ್ದು, 45 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತು ನಿರ್ವಹಣಾ ಸೇವೆಗಳ ವಕ್ತಾರ ರಾಬರ್ಟ್ ಮುಲಾಡ್ಜಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೊಸ ನಕ್ಷೆಯನ್ನು ಸಮರ್ಥಿಸಿಕೊಂಡ ಚೀನಾ – ಅತಿರೇಕದ ವ್ಯಾಖ್ಯಾನ ಬೇಡ ಎಂದ ಡ್ರ್ಯಾಗನ್‌ ರಾಷ್ಟ್ರ

ಬೆಂಕಿ ಅವಘಡ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ದಟ್ಟ ಹೊಗೆ ಪ್ರದೇಶ ಸುತ್ತ ಆವರಿಸಿಕೊಂಡಿದೆ.

suddiyaana