ಮೆಜೆಸ್ಟಿಕ್‍ಗೆ ಆಗಮಿಸಿದ್ದ ರೈಲಿನಲ್ಲಿ ಬೆಂಕಿ – 2 ಬೋಗಿಗಳು ಸಂಪೂರ್ಣ ಭಸ್ಮ
ಬೆಂಗಳೂರು: ಮೆಜೆಸ್ಟಿಕ್ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಎರಡು ಬೋಗಿಗಳು ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಮುಂಬೈನಿಂದ ಬೆಳಗ್ಗೆ 6.30 ರ ಸುಮಾರಿಗೆ ಆಗಮಿಸಿತ್ತು. ಈ ವೇಳೆ ಇಂಜಿನ್‍ನಿಂದ ಐದು ಬೋಗಿಗಳ ದೂರದಲ್ಲಿದ್ದ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೇಲ್ವೇ ಇಂಜಿನ್‍ನಿಂದ ಹೊರಬಂದ ದಟ್ಟ ಹೊಗೆಯನ್ನು ನೋಡಿ ಪ್ರಯಾಣಿಕರು ಆತಂಕಗೊಂಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಉದ್ಯಾನ್ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಆತ್ಮಹತ್ಯೆ ತಪ್ಪಿಸಲು ಮಾಸ್ಟರ್ ಪ್ಲಾನ್ – ಪಿಜಿ, ಹಾಸ್ಟೆಲ್‌ಗಳಿಗೆ ಜಿಲ್ಲಾಡಳಿತದಿಂದ ವಿಚಿತ್ರ ಆದೇಶ!
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಎಸಿ ಕೋಚ್ನಿಂದಲೇ ಮೊದಲು ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಈಗಾಗಲೇ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯಿಂದ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿತ್ತು.