‘ಬೆಂಕಿ’ಯಿಂದ ಸಿಎಂ ಬಸವರಾಜ ಬೊಮ್ಮಾಯಿ ಜಸ್ಟ್ ಮಿಸ್..! – ಹೆಲಿಪ್ಯಾಡ್ ಧಗಧಗ

‘ಬೆಂಕಿ’ಯಿಂದ ಸಿಎಂ ಬಸವರಾಜ ಬೊಮ್ಮಾಯಿ ಜಸ್ಟ್ ಮಿಸ್..! – ಹೆಲಿಪ್ಯಾಡ್ ಧಗಧಗ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾವಳಿಯಲ್ಲಿ ದೇಗುಲಗಳ ಪ್ರದಕ್ಷಿಣೆ ಮಾಡುತ್ತಿದ್ದಾರೆ. ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಮಾಡಿದ್ದ ಸಿಎಂ ಬೊಮ್ಮಾಯಿ ಗುರುವಾರ ಬೆಳಗ್ಗೆ ಕೊಲ್ಲೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಹೆಲಿಪ್ಯಾಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅನಾಹುತದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?

ಅರೆಶಿರೂರು ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.

suddiyaana