ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ದೇವಿ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ದೇವಿ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ವಿದ್ಯುದ್ದೀಪಾಲಂಕಾರ, ವಿವಿಧ ಹೂವುಗಳಿಂದ ದೇವಾಲಯವನ್ನು ಅಲಂಕರಿಸಿದ್ದು, ಮುಂಜಾನೆಯಿಂದಲೇ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಅಲಂಕೃತ ದೇವಿ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಭಕ್ತರು ಉತ್ಸುಕರಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯದಿಂದ ಸಾವಿರಾರು ಭಕ್ತಾಧಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆಗೆ ಉತ್ತಮ ರೆಸ್ಪಾನ್ಸ್‌ – ಐದು ದಿನದಲ್ಲಿ 20 ಲಕ್ಷಕ್ಕೂ ಹೆಚ್ಚು ಗ್ರಾಹಕರ ಅರ್ಜಿ ಸಲ್ಲಿಕೆ

ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಮುಂಜಾನೆಯಿಂದ ಅಭಿಷೇಕ ನೆರೆವೇರಿಸಿ, ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ದೇವಸ್ಥಾನದ ಪ್ರಮುಖ ಅರ್ಚಕರಾದ ಶಶಿಧರ್ ದೀಕ್ಷಿತ್ ತಿಳಿಸಿದ್ದಾರೆ.

ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಸರತಿ ಸಾಲಿನಲ್ಲಿ ನಿಂತಿದ್ದ ಅಭಿಮಾನಿಗಳತ್ತ ಕೈಬೀಸಿದ್ದಾರೆ.

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಕಿರಿದಾದ ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್ಆರ್‌ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಮಹಲ್ ಹೆಲಿಪ್ಯಾಡ್‌ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೆಸ್‌ ಹೆಲಿಪ್ಯಾಡ್‌ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ಇರಲಿದೆ.

suddiyaana