ಮಹಾಮಾರಿ H3N2 ವೈರಸ್ ಗೆ ಕರ್ನಾಟಕದಲ್ಲಿ ಮೊದಲ ಬಲಿ

ಮಹಾಮಾರಿ H3N2 ವೈರಸ್ ಗೆ ಕರ್ನಾಟಕದಲ್ಲಿ ಮೊದಲ ಬಲಿ

ಹಾಸನ: ರಾಜ್ಯದಲ್ಲಿ ಇನ್​ಪ್ಲುಯೆನ್ಸಾ ಹೆಸರಿನ H3N2 ವೈರಸ್ ಕಾಡೋಕೆ ಶುರುಮಾಡಿದ್ದು, ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಈ ಮಹಾಮಾರಿಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ನಲ್ಲಿ ಬೆಂಕಿ – ನಿರ್ವಾಹಕ ಸಜೀವ ದಹನ

ಹಾಸನ ಜಿಲ್ಲೆಯ ಆಲೂರು ತಾಲೂಕಿನ 83 ವರ್ಷದ ವೃದ್ಧ ಜ್ವರ, ಗಂಟಲು ನೋವು, ಕೆಮ್ಮಿನಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 1 ರಂದು ಆಲೂರಿನಲ್ಲಿ ವೃದ್ಧ ಮೃತಪಟ್ಟಿದ್ದರು. ವೃದ್ಧನಿಗೆ ಹೆಚ್3ಎನ್2 ಮಾರಣಾಂತಿಕ ಸೋಂಕು ಇತ್ತು ಎಂದು ಆರೋಗ್ಯ ಇಲಾಖೆ ಡಿಎಚ್‌ಓ ಡಾ.ಶಿವಸ್ವಾಮಿ ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ H3N2 ವೈರಸ್ ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಈವರೆಗೆ 6 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲ ಹಳ್ಳಿಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತ ಜನರ ಹಾಗೂ ವೃದ್ಧರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಗ್ರಾಮಸ್ಥರ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿರುವುದಾಗಿ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

suddiyaana