ಕೇಂದ್ರ ಗುಪ್ತಚರ ಇಲಾಖೆಯಿಂದ ಮಾಹಿತಿ – ಚಿಕ್ಕಮಗಳೂರಿನಲ್ಲಿ ಐವರು ಬಾಂಗ್ಲಾ ವಲಸಿಗರು ಅರೆಸ್ಟ್
ಚಿಕ್ಕಮಗಳೂರಿನಲ್ಲಿ ಐವರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳನ್ನು ಪೊಲೀಸರು ಬಂದಿಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದಲ್ಲಿ ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದು, ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ.
ಕಳೆದ ಎರಡು ತಿಂಗಳಿಂದ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದರು. ಇದೇ ವೇಳೆ ನಡೆದ ಪರಿಶೀಲನೆಯಲ್ಲಿ ಐವರು ಕಾಫಿ ಎಸ್ಟೇಟ್ಗಳು ಸೇರಿದಂತೆ ವಿವಿಧೆಡೆ ದಿನಗೂಲಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.
ಬಂಧಿತರನ್ನು ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್ ಹಾಗೂ ಮಹಮದ್ ಹಸೀಬುಲ್ ಎಂದು ಗುರುತಿಸಲಾಗಿದೆ. ಕೆಲವರು ಒಂಟಿಯಾಗಿ ಚಿಕ್ಕಮಗಳೂರಿಗೆ ಬಂದಿದ್ದರೆ, ಇನ್ನೂ ಕೆಲವರು ಕುಟುಂಬ ಸಮೇತರಾಗಿ ಬಂದಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಟೀಂ ಇಂಡಿಯಾಗೆ SPIN ಸುಳಿ! – KL & ಜೈಸ್ವಾಲ್ ಸ್ಪೆಷಲ್ ಪ್ರಾಕ್ಟೀಸ್!
ಬಂಧಿತರು ಚಿಕ್ಕಮಗಳೂರಿಗೆ ಹೇಗೆ ಬಂದರು, ಅವರನ್ನು ಯಾರು ಕರೆತಂದರು, ಎಲ್ಲಿಂದ ಬಂದರು, ಅವರ ಏಜೆಂಟ್ ಯಾರು ಹಾಗೂ ಸಂಪರ್ಕ ಹೇಗೆ ಬೆಳೆಸಿಕೊಂಡರು ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಪಡೆಯಲು ವಿಚಾರಣೆ ಮುಂದುವರಿದಿದೆ. ಈಗಾಗಲೇ ಬೇರೆ ಜಿಲ್ಲೆಗಳು ಹಾಗೂ ರಾಜ್ಯಗಳಲ್ಲೂ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳು ಬಂಧನವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ನೋಡಿರಿ

