ಅಮರನಾಥ ಯಾತ್ರೆ ವೇಳೆ ಐವರು ಸಾವು –ಮೃತರ ಸಂಖ್ಯೆ 24ಕ್ಕೆ ಏರಿಕೆ

ಅಮರನಾಥ ಯಾತ್ರೆ ವೇಳೆ ಐವರು ಸಾವು –ಮೃತರ ಸಂಖ್ಯೆ 24ಕ್ಕೆ ಏರಿಕೆ

ಕಾಶ್ಮೀರ: ಜಮ್ಮು ಕಾಶ್ಮೀರದಲ್ಲಿ ಒಂದೆಡೆ ಪ್ರತಿಕೂಲ ಹವಾಮಾನ ಮುಂದುವರಿದ್ದಿದ್ದರೆ, ಅಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಸಾವು ಕೂಡ ಮುಂದುವರೆದಿದೆ. ಕಳೆದ 36 ಗಂಟೆಗಳ ಅವಧಿಯಲ್ಲಿ ಐವರು ಯಾತ್ರಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಹಲವು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಮಳೆ ಹಾಗೂ ಪ್ರತಿಕೂಲ ಹವಾಮಾನದಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು. ಇದೀಗ ಯಾತ್ರೆ ವೇಳೆ ಎತ್ತರದ ಪ್ರದೇಶಗಳಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಕಳೆದ 36 ಗಂಟೆಗಳ ಅವಧಿಯಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಮತ್ತೊಂದು ಚೀತಾ ಸಾವು.. ಮೃತಪಟ್ಟ ಚೀತಾಗಳ ಸಂಖ್ಯೆ 8ಕ್ಕೆ ಏರಿಕೆ  

ಯಾತ್ರೆಯ ಪಹಲ್ಗಾಮ್ ಅಕ್ಷದಲ್ಲಿ ನಾಲ್ಕು ಜನರು ಸಾವನ್ನಪ್ಪಿದರೆ, ಬಾಲ್ಟಾಲ್ ಮಾರ್ಗದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಯಾತ್ರಿಕರು ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ಗುಜರಾತ್‌ಗೆ ಸೇರಿದವರಾಗಿದ್ದಾರೆ. ಒಬ್ಬರ ಗುರುತು ಪತ್ತೆಯಾಗಿಲ್ಲ. ಬಲಿಯಾದವರಲ್ಲಿ ಯಾತ್ರಾ ಕರ್ತವ್ಯದಲ್ಲಿ ನಿಯೋಜಿಸಲಾದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿ, ಒಬ್ಬ ಸಾಧು ಮತ್ತು ಸೇವಾದಾರ್ ಇದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎತ್ತರದ ಪ್ರದೇಶಗಳಲ್ಲಿ ಆಮ್ಲಜನಕ ಪ್ರಮಾಣ ಕಡಿಮೆಯಿದೆ. ಇದರಿಂದಾಗಿ ಹೃದಯ ಸ್ತಂಭನ ಉಂಟಾಗುತ್ತಿದ್ದು, ಅಮರನಾಥ ಯಾತ್ರಿಕರು ಮತ್ತು ಅಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಾವಿನ ಸಾಮಾನ್ಯ ಕಾರಣಗಳಲ್ಲಿ ಒಂದಾಗಿದೆ ಎನ್ನಲಾಗಿದೆ.

suddiyaana