ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ಗೆ ಸೇರ್ಪಡೆ

ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದೆ.  ‘ಆಪರೇಷನ್ ಹಸ್ತ’ದ ಮೂಲಕ ಕಾಂಗ್ರೆಸ್  ಬಿಜೆಪಿ ಶಾಸಕರನ್ನು ಪಕ್ಷಕ್ಕೆ ಸೇಪಡೆ ಮಾಡಿಕೊಳ್ಳುತ್ತಿದೆ. ಇದೀಗ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಕೆ.ಪೂರ್ಣಿಮಾ ಅವರನ್ನು ಪಕ್ಷಕ್ಕೆ ಸೆಳೆದ ‘ಕೈ’ ಪಾಳೆಯ ರಾಜಕೀಯ ದಾಳ ಉರುಳಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ಭಾರತದ ಮೊದಲ ಪ್ರಾದೇಶಿಕ ರಾಪಿಡ್ ರೈಲು ಸೇವೆ ‘ನಮೋ ಭಾರತ್‌’ಗೆ ಪ್ರಧಾನಿ ಚಾಲನೆ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್‌ಗೆ ಸೇರಿದರು.

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ‘ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಬಿಜೆಪಿಯ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ಯಾದವ ಸಂಘದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್, ಬಿಜೆಪಿಯ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರು ಇಂದು ಪಕ್ಷಕ್ಕೆ ಸೇರಿದ್ದಾರೆ. ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದೆ’ ಎಂದು ಬರೆದುಕೊಂಡಿದ್ದಾರೆ.

Shwetha M