ತೆಲಂಗಾಣದ ಮಾಜಿ ಮುಖ್ಯಮಂತ್ರಿ KCR ದಿಢೀರ್ ಆಸ್ಪತ್ರೆಗೆ ದಾಖಲು
ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಮಿಚಾಂಗ್ ಚಂಡಮಾರುತ ಎಫೆಕ್ಟ್ – ತಮಿಳುನಾಡಿನಲ್ಲಿ ಮಳೆ ಮುಂದುವರಿಕೆ, ಸತತ ಐದನೇ ದಿನವೂ ಶಾಲಾ-ಕಾಲೇಜುಗಳಿಗೆ ರಜೆ
ಕೆ ಚಂದ್ರಶೇಖರ ರಾವ್ ಅವರು ಗುರುವಾರ ತಮ್ಮ ನಿವಾಸದಲ್ಲಿ ಜಾರಿ ಬಿದ್ದ ಪರಿಣಾಮ ಮೂಳೆ ಮುರಿತಕ್ಕೊಳಗಾಗಿದ್ದಾರೆ. ಹೀಗಾಗಿ ಅವರನ್ನು ಸೋಮಾಜಿಗುಡಾದ ಯಶೋಧಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಸಿಆರ್ ಅನಾರೋಗ್ಯದ ವಿಷಯ ತಿಳಿದ ತಕ್ಷಣ ಕುಟುಂಬಸ್ಥರೆಲ್ಲಾ ಆಸ್ಪತ್ರೆಗೆ ಧಾವಿಸಿದ್ದಾರೆ. ಯಶೋಧಾ ಆಸ್ಪತ್ರೆಯ 9ನೇ ಮಹಡಿಯಲ್ಲಿ ಕೆಸಿಆರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ವೈದ್ಯರು ಪರೀಕ್ಷೆ ಮಾಡಿ ಹೆಲ್ತ್ ಬುಲೆಟಿನ್ ನೀಡಲಿದ್ದಾರೆ. ಸದ್ಯ ಕೆಸಿಆರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದ್ರೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (BRS) ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.