ಡಿ.ವಿ ಸದಾನಂದ ಗೌಡ ಬ್ಯಾಂಕ್ ಅಕೌಂಟ್ ಹ್ಯಾಕ್! – ಲಕ್ಷ ಲಕ್ಷ ಕಳೆದುಕೊಂಡ ಮಾಜಿ ಸಿಎಂ

ದೇಶದಲ್ಲಿ ಈಗ ಸೈಬರ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೈಬರ್ ಕಳ್ಳರು ತಮ್ಮ ಕೈಚಳಕ ತೋರಿಸಿ, ನಮ್ಮ ಡೇಟಾವನ್ನ ಹ್ಯಾಕ್ ಮಾಡ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಲ್ ವುಡ್ ನಟ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಆಗಿತ್ತು. ಇದೀಗ ರಾಜ್ಯದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರಿಗೂ ಸೈಬರ್ ಕಳ್ಳರ ಕಾಟ ಶುರುವಾಗಿದೆ. ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ್ದಾರೆ.
ಇದನ್ನೂ ಓದಿ: ಕೇರಳದ ದೇಗುಲಕ್ಕೆ ಆನೆ ಗಿಫ್ಟ್ ಕೊಟ್ಟ ಕನ್ನಡಿಗ – ಮತ್ತೊಮ್ಮೆ ದೈವಭಕ್ತಿ ಮೆರೆದ KL ರಾಹುಲ್!
ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರ ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಡಿ.ವಿ ಸದಾನಂದ ಗೌಡ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಆಗಿದೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಕಳ್ಳರು ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ಹೇಳಿದ್ದಾರೆ.
ಇನ್ನು ಹೆಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಮಾಯವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಮ್ ಗೆ ದೂರು ನೀಡಲಿದ್ದೇನೆ ಎಂದು ಹೇಳಿದ್ದಾರೆ.

ನೋಡಿರಿ

