ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರ ಸಲಹೆಯಂತೆ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ:  ಕುಮಾರಸ್ವಾಮಿಗೆ ತೀವ್ರ ಜ್ವರ – ಮಗನಿಗಾಗಿ ಆರೋಗ್ಯ ಲೆಕ್ಕಿಸದೆ ಅಖಾಡಕ್ಕಿಳಿದ ದೊಡ್ಡಗೌಡರು..!

ಕಳೆದ ಒಂದೆರಡು ತಿಂಗಳಿನಿಂದ ಪಂಚರತ್ನ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಸುಡು ಬಿಸಿಲನ್ನೂ ಲೆಕ್ಕಿಸದೇ ರಾಜ್ಯದೆಲ್ಲೆಡೆ ಪ್ರವಾಸ ನಡೆಸಿದ್ದರು. ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದರಿಂದ ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಸಣ್ಣ ಪ್ರಮಾಣದಲ್ಲಿ ಲಂಗ್ಸ್ ಇನ್ಫೆಕ್ಷನ್ ಹಾಗೂ ಡಸ್ಟ್ ಅಲರ್ಜಿ ಕೂಡ ಇದೆ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ಕುಮಾರಸ್ವಾಮಿ ಅವರನ್ನು ಸ್ಪೆಷಲ್ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಕುಮಾರಸ್ವಾಮಿ ಅವರು ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳನ್ನು ನಡೆಸುತ್ತಾ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಬೆಡ್ ಮೇಲೆ ಕುಳಿತುಕೊಂಡೇ ಪಕ್ಷದ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು.

suddiyaana