ಮಮತಾ ಸರ್ಕಾರ ಉರುಳಿಸೊವರೆಗೂ ತಲೆ ಕೂದಲು ಬೆಳೆಸಲ್ಲ ಎಂದಿದ್ದ ಕೈ ನಾಯಕ ಬಿಜೆಪಿ ಸೇರ್ಪಡೆ

ಮಮತಾ ಸರ್ಕಾರ ಉರುಳಿಸೊವರೆಗೂ ತಲೆ ಕೂದಲು ಬೆಳೆಸಲ್ಲ ಎಂದಿದ್ದ ಕೈ ನಾಯಕ ಬಿಜೆಪಿ ಸೇರ್ಪಡೆ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳ ಬಾಕಿ ಉಳಿಸಿದೆ. ಈ ಹೊತ್ತಲ್ಲಿ ಪಶ್ಚಿಮ ಬಂಗಾಳದಲ್ಲಿ ಭಾರಿ ರಾಜಕೀಯ ಬೆಳವಣಿಗೆಗಳಾಗುತ್ತಿವೆ. ಇದೀಗ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿದ್ದ ಕಾಂಗ್ರೆಸ್‌ ನಾಯಕ ಕೌಸ್ತವ್ ಬಾಗ್ಚಿ ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಶಾಪಿಂಗ್‌ ಮಾಲ್‌ನಲ್ಲಿ ಭೀಕರ ಬೆಂಕಿ ಅವಘಡ – 44 ಮಂದಿ ಸಾವು

ಪಕ್ಷದ ಇತರರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಬಾಗ್ಚಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಬಳಿಕ ಕೌಸ್ತವ್ ಬಾಗ್ಚಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಬಿಜೆಪಿಗೆ ಕೌಸ್ತವ್ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಕೂಡ ಉಪಸ್ಥಿತರಿದ್ದರು.

ಕಳೆದ ವರ್ಷ (2023) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಡಿದ್ದಕ್ಕೆ ಬಾಗ್ಚಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

Shwetha M