ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ನಿಧನ

ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ನಿಧನ

ಲೋಕಸಭೆಯ ಸ್ಪೀಕರ್‌, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನೆ ನಾಯಕ ಮನೋಹರ್‌ ಜೋಶಿ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರೈತರ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾರಿ ಹಿಂಸಾಚಾರ – ಇಬ್ಬರು ಪೊಲೀಸ್ ಅಧಿಕಾರಿಗಳು ಸಾವು

ಮನೋಹರ್ ಜೋಶಿ ಅವರಿಗೆ ಫೆಬ್ರವರಿ 21ರಂದು ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ  ಪಿಡಿ ಹಿಂದೂಜಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಶುಕ್ರವಾರ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಕಳೆದ ವರ್ಷ ಮೇ ತಿಂಗಳಲ್ಲಿ ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದ ಜೋಶಿಯವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜೋಶಿ ಅವರು 1995 ರಿಂದ 1999 ರವರೆಗೆ ಮುಖ್ಯಮಂತ್ರಿಯಾಗಿದ್ದರು ಮತ್ತು ಅವಿಭಜಿತ ಶಿವಸೇನೆಯಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಸಂಸತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಆಗಿದ್ದರು.

Shwetha M