ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ- ಗಣ್ಯರ ಸಂತಾಪ, ಇಂದು ತಿಪಟೂರಿನಲ್ಲಿ ಅಂತಿಮ ಸಂಸ್ಕಾರ

ಕರ್ನಾಟಕದ ಮಾಜಿ ಶಿಕ್ಷಣ ಸಚಿವರು ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ (೬೭) ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ. ಇಂದು ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ: ಪಿಲ್ಲರ್ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾ*ವು!- ಇಂಜಿನಿಯರ್‌ಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಹಲವು ನಾಯಕರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿ.ಇ. ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ತಮ್ಮ ರಾಜಕೀಯ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣಕಾಲಿಕ ಕಾರ್ಯಕರ್ತರಾಗಿ ಪ್ರಾರಂಭಿಸಿದ್ದರು. ತಿಪಟೂರು ಕ್ಷೇತ್ರದಿಂದ 2008 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್, ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು. ಬೆಂಗಳೂರಿನ ಮಗಳ ಮನೆಯಲ್ಲಿ ಕೊನೆಯುಸಿರೆಳೆದ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ತಿಪಟೂರಿಗೆ ತೆಗೆದುಕೊಂಡು ಹೋಗುತ್ತಿದ್ದು, ನಾಳೆ ಸ್ವಕ್ಷೇತ್ರದಲ್ಲೇ ಅಂತಿಮ ಸಂಸ್ಕಾರ ನಡೆಯಲಿದೆ. ಮೃತರು ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

ನೋಡಿರಿ

