ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ವಿಧಿವಶ
ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಸುಮಾರು 1 ಗಂಟೆಗೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಮಾಜಿ ಸಂಸದ ಇಕ್ಬಾಲ್ ಸರಡಗಿ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ಬಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯರಾತ್ರಿ 01 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಈ ದಿನದಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ! – ಕಾರಣವೇನು ಗೊತ್ತಾ?
ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಸಂಜೆ 6 ಗಂಟೆಗೆ ಕಲಬುರಗಿಯಲ್ಲಿ ಇಕ್ಬಾಲ್ ಅಹ್ಮದ್ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ. ಸರಡಗಿ ನಿಧನಕ್ಕೆ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ ಎನ್.ಧರ್ಮಸಿಂಗ್ ಪರಮಾಪ್ತರಾಗಿದ್ದ ಸರಡಗಿ 1999 ಮತ್ತು 2004 ರಲ್ಲಿ 2 ಬಾರಿ ಸಂಸದ, 1 ಬಾರಿ ಎಂಎಲ್ಸಿ ಆಗಿ ಸೇವೆ ಸಲ್ಲಿಸಿದ್ದಾರೆ. 2009 ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ನಂತರ ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಸಂಜೆ 6 ಗಂಟೆಗೆ ಕಲಬುರಗಿಯಲ್ಲಿ ಇಕ್ಬಾಲ್ ಅಹ್ಮದ್ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ. ಸರಡಗಿ ನಿಧನಕ್ಕೆ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ನಗರದ ಐವಾನ್- ಇ-ಶಾಹಿ ಪ್ರದೇಶದಲ್ಲಿರುವ ನಿವಾಸದಲ್ಲಿ ಇಡೀ ದಿನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 6ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕಳೆದ ಹಲವು ತಿಂಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅಲ್ಲದೆ ಕಳೆದ ಎರಡು ವರ್ಷದಿಂದ ಸಕ್ರೀಯ ರಾಜಕಾರಣದಿಂದ ದೂರವಾಗಿದ್ದರು.