ತೋಷಖಾನಾ ಭ್ರಷ್ಟಾಚಾರ ಪ್ರಕರಣ – ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಬಂಧನ

ತೋಷಖಾನಾ ಭ್ರಷ್ಟಾಚಾರ ಪ್ರಕರಣ – ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಬಂಧನ

ತೋಷಖಾನಾ ಭ್ರಷ್ಟಾಚಾರ  ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್​ ಖಾನ್​ರನ್ನು, ಅವರ ಜಮಾನ್ ಪಾರ್ಕ್ ಮನೆಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಸರ್ಕಾರಕ್ಕೆ ವಿದೇಶಿ ಗಣ್ಯರು ನೀಡಿದ್ದ ಉಡುಗೊರೆಗಳನ್ನು ಸ್ವಂತ ಲಾಭಕ್ಕಾಗಿ ಮಾರಿದ ಆರೋಪದಲ್ಲಿ ಇಮ್ರಾನ್ ಖಾನ್ ತಪ್ಪಿತಸ್ಥರೆಂದು ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ಘೋಷಿಸಿದೆ. ಈ ಹಿನ್ನೆಲೆ ನ್ಯಾಯಾಲಯವು ಇಮ್ರಾನ್ ಖಾನ್ ಮೇಲೆ 1 ಲಕ್ಷ ಪಾಕಿಸ್ತಾನಿ ರೂ. ದಂಡ ವಿಧಿಸಿದ್ದು, ಅದನ್ನು ಪಾವತಿಸಲು ವಿಫಲವಾದರೆ, ಹೆಚ್ಚುವರಿ ಆರು ತಿಂಗಳು ಜೈಲು ಶಿಕ್ಷೆಯನ್ನು ಸಂಪೂರ್ಣಗೊಳಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ – ಅಮರನಾಥಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಶೋಭಾ ಕರಂದ್ಲಾಜೆ

ಇಮ್ರಾನ್ ಖಾನ್ ಪಾಕಿಸ್ತಾನದ ಚುನಾವಣಾ ಆಯೋಗಕ್ಕೆ ನಕಲಿ ವಿವರಗಳನ್ನು ಸಲ್ಲಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಜಿಲ್ಲೆ ಮತ್ತು ಅಧಿವೇಶನ ನ್ಯಾಯಾಧೀಶರು ಈ ಪ್ರಕರಣದಲ್ಲಿ ಮಾಜಿ ಪ್ರಧಾನ ಮಂತ್ರಿಯ ವಿರುದ್ಧದ ಆರೋಪಗಳು ಸಾಬೀತಾಗಿದೆ ಎಂದು ಹುಮಾಯುನ್ ದಿಲಾವರ್ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಇಮ್ರಾನ್‌ ಖಾನ್‌ ಗೆ ಜೈಲು ಶಿಕ್ಷೆಯಾದ ಬೆನ್ನಲ್ಲೇ ಅವರ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಇಮ್ರಾನ್ ಖಾನ್ ಅವರನ್ನು ಅನರ್ಹಗೊಳಿಸುವುದು ಮತ್ತು ಜೈಲಿಗೆ ಹಾಕುವುದೇ ಉದ್ದೇಶವಾಗಿದ್ದು ಇದು ಕಾನೂನಿನ ಅಪಹಾಸ್ಯವಾಗಿದೆ. ಇದು ಸಂಪೂರ್ಣವಾಗಿ ನಾಚಿಕೆಗೇಡಿನ ವಿಚಾರವಾಗಿದ್ದು ಅಸಹ್ಯಕರವಾಗಿದೆ ಎಂದು ಆಕ್ರೋಶ ಹೊರಹಾಕಿದೆ.

suddiyaana