ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು! – ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು! – ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ಮಾಜಿ ಪ್ರಧಾನಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ವೀಕ್ಷಣೆ ವೇಳೆ ಹುಚ್ಚಾಟ! – ಅಭಿಮಾನಿಗಳಿಗೆ ಡಿವೈನ್‌ ಸ್ಟಾರ್‌ ವಾರ್ನ್!‌

ಹೆಚ್‌ ಡಿ ದೇವೇಗೌಡ ಅವರು ಇಂದು ಅಸ್ವಸ್ಥರಾಗಿದ್ದು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ದೇವೇಗೌಡರಿಗೆ ಏನಾಗಿದೆ ಎನ್ನುವ ಬಗ್ಗೆ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಗಳಿವೆ.

ಹೆಚ್‌ಡಿ ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ವರ್ಷ ಅಷ್ಟೇ ಅಂದ್ರೆ 2024ರ ಫೆಬ್ರವರಿ 15ರಂದು ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯವಾಗಿ ಡಿಸ್ಚಾರ್ಜ್ ಆಗಿದ್ದರು.

Shwetha M