ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್‌ಗೆ ಹಂದಿ ಜ್ವರ & ಕೋವಿಡ್ ಪಾಸಿಟಿವ್ – ಆಸ್ಪತ್ರೆಗೆ ದಾಖಲು
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೆಹ್ಲೋಟ್‌ಗೆ ಕೋವಿಡ್-19 ಹಾಗೂ ಹಂದಿ ಜ್ವರ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುವಾಗ ಜೋರಾಗಿ ಮಾತಾಡಿದ್ರೆ ಹುಷಾರ್! – ನಿಮ್ಮ ಮೇಲೆ ಬೀಳುತ್ತೆ ಕೇಸ್!
ಈ ಕುರಿತು ಮಾಹಿತಿ ಅಶೋಕ್ ಗೆಹ್ಲೋಟ್ ಅವರೇ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ ವೈದ್ಯರ ಸಲಹೆ ಮೇರೆಗೆ ನಾನು ಪರೀಕ್ಷೆಗೆ ಒಳಗಾಗಿದ್ದು ಕೋವಿಡ್-19 ಹಾಗೂ ಹಂದಿಜ್ವರ ಪಾಸಿಟಿವ್ ಎಂದು ದೃಢಪಟ್ಟಿದೆ. ಇದರಿಂದಾಗಿ ಮುಂದಿನ ಏಳು ದಿನಗಳವರೆಗೆ ನಾನು ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಬದಲಾದ ಕಾಲಮಾನದಲ್ಲಿ ಪಕ್ಷದ ಮುಖಂಡರೂ ತಮ್ಮ ಆರೋಗ್ಯ ನೋಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಪಕ್ಷದ ಮುಖಂಡರು ಸಹ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಾರೆ. ಮುಂದಿನ ಚಿಕಿತ್ಸೆಗಾಗಿ ಅಶೋಕ್ ಗೆಹ್ಲೋಟ್ ಅವರನ್ನು ಜೈಪುರದ SMS ಆಸ್ಪತ್ರೆಯ ಐಡಿಎಚ್ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಂಚರಾಜ್ಯ ಚುನಾವಣೆ ಸಂದರ್ಭದಲ್ಲಿ ಸಕ್ರೀಯವಾಗಿ ಪ್ರಚಾರದಲ್ಲಿ ತೊಡಗಿದ್ದ ಅಶೋಕ್ ಗೆಹ್ಲೋಟ್ ಚುನಾವಣೆ ಫಲಿತಾಂಶದ ಬಳಿಕ ಸಾರ್ವಜನಿಕ ವೇದಿಕೆಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದನ್ನೂ ಕಡಿಮೆ ಮಾಡಿದ್ದರು. ಕಳೆದ ಒಂದು ವಾರದಿಂದ ಅವರಿಗೆ ಜ್ವರ ಕಾಣಿಸಿಕೊಂಡಿದ್ದ ಕಾರಣ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು.