ಭದ್ರತಾ ಪಡೆ ಭಯೋತ್ಪಾದಕರ ನಡುವೆ ಫೈರಿಂಗ್ – ನಾಲ್ವರು ಕುಕಿ ಉಗ್ರರು ಫಿನಿಷ್

ಭದ್ರತಾ ಪಡೆ ಭಯೋತ್ಪಾದಕರ ನಡುವೆ ಫೈರಿಂಗ್ –   ನಾಲ್ವರು ಕುಕಿ ಉಗ್ರರು ಫಿನಿಷ್

ಮಣಿಪುರದಲ್ಲಿ ಮಂಗಳವಾರ ಬೆಳಗಿನ ಜಾವ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ ಎಂಬ ದಂಗೆಕೋರ ಗುಂಪಿನ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಚುರಾಚಂದ್‌ಪುರ ಜಿಲ್ಲೆಯ ಹೆಂಗ್ಲೆಪ್ ಉಪವಿಭಾಗದ ಖಾನ್ಪಿ ಗ್ರಾಮದಲ್ಲಿ ಈ ಎನ್ ಕೌಂಟರ್ ನಡೆದಿದೆ.

ಇದನ್ನೂ ಓದಿ: ಸಂಜು ಸ್ಯಾಮ್ಸನ್ ಕೆರಿಯರ್ ಮುಗಿಸಿದ ಶುಭ್ ಮನ್ ಗಿಲ್ – ಓಪನರ್ ಸ್ಲಾಟ್ ಬಿಟ್ಟಿದ್ದೇ ತಪ್ಪಾಯ್ತಾ?

ಮಣಿಪುರದ ಚುರಾಚಂದ್‌ಪುರದಿಂದ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಸೇನಾ ಪಡೆಯ ಮೇಲೆ ಭಯೋತ್ಪಾದಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ, ಭಯೋತ್ಪಾದಕ ಗುಂಪಿನ ನಾಲ್ವರು ಮೃತಪಟ್ಟಿದ್ದಾರೆ” ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಯುಕೆಎನ್‌ಎ ಉಗ್ರರ ಇತ್ತೀಚಿನ ದೌರ್ಜನ್ಯಗಳನ್ನು ಅನುಸರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹತ್ಯೆಯಾದ ಉಗ್ರರು, ಗ್ರಾಮದ ಮುಖ್ಯಸ್ಥನ ಹತ್ಯೆ, ಸ್ಥಳೀಯರಿಗೆ ಬೆದರಿಕೆ ಮತ್ತು ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಭಂಗಗೊಳಿಸುವ ಪ್ರಯತ್ನ ನಡೆಸಿದ್ದರು.

ಈ ಭಯೋತ್ಪಾದಕರನ್ನು ಯಶಸ್ವಿಯಾಗಿ ತಟಸ್ಥಗೊಳಿಸಿರುವುದು ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್, ಮುಗ್ಧ ನಾಗರಿಕರನ್ನು ರಕ್ಷಿಸುವ ಮತ್ತು ಬೆದರಿಕೆಗಳನ್ನು ತಗ್ಗಿಸಿ ಮಣಿಪುರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧತೆಯನ್ನು ಎತ್ತಿ ತೋರಿಸುತ್ತದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. .

Kishor KV