2030ರ ವೇಳೆಗೆ ಸುಮಾರು 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್ ಸ್ವಾಗತಿಸಲಿದೆ –  ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌

2030ರ ವೇಳೆಗೆ ಸುಮಾರು 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್ ಸ್ವಾಗತಿಸಲಿದೆ –  ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಅವರು ಗಣರಾಜ್ಯೋತ್ಸವದ ಅಂಗವಾಗಿ ಭಾರತಕ್ಕೆ ಅತಿಥಿಯಾಗಿ ಆಗಮಿಸಿದ್ದಾರೆ. ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ಮಹತ್ವದ ಸುದ್ದಿಯೊಂದನ್ನು ಮ್ಯಾಕ್ರನ್‌  ಘೋಷಿಸಿದ್ದಾರೆ. 2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್ ಸ್ವಾಗತಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ಹೋದಷ್ಟೇ ಸ್ಪೀಡ್ ಆಗಿ ವಾಪಸ್ ಆದ ಜಗದೀಶ್ ಶೆಟ್ಟರ್ – ‘ಕೈ’ಗೆ ಬೈ ಬೈ ಹೇಳಲು ಕಾರಣವೇನು?

ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮ್ಯಾಕ್ರನ್‌ , 2030ರ ವೇಳೆಗೆ ಸುಮಾರು 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್‌ನಲ್ಲಿ ಅಧ್ಯಯನ ಮಾಡಲು ಆಹ್ವಾನಿಸುವುದಾಗಿ ನಿರ್ಧರಿಸಿದ್ದೇನೆ. ಇದು ಬಹಳ ಮಹತ್ವಾಕಾಂಕ್ಷೆಯ ಗುರಿಯಾಗಿದೆ, ಆದರೆ ನಾನು ಅದನ್ನು ಮಾಡಲು ತೀರ್ಮಾನಿಸಿರುವುದಾಗಿ ಮ್ಯಾಕ್ರನ್‌ ತಿಳಿಸಿದ್ದಾರೆ.

ಗುರುವಾರ ಭಾರತಕ್ಕೆ ಆಗಮಿಸಿರುವ ಮ್ಯಾಕ್ರನ್‌ ಅವರು ಜೈಪುರಕ್ಕೆ ಆಗಮಿಸಿದ್ದು ಈ ವೇಳೆ ಅವರನ್ನು ನರೇಂದ್ರ ಮೋದಿ ಅವರು ಸ್ವಾಗತಿಸಿದ್ದರು. ಬಳಿಕ ಪ್ರಧಾನಿ ಜೊತೆ ಜೈಪುರದಲ್ಲಿ ಭರ್ಜರಿ ರೋಡ್ ಶೋ ನಲ್ಲಿ ಭಾಗಿಯಾಗಿದ್ದರು. ಗಣರಾಜ್ಯೋತ್ಸವದ ಬಳಿಕ ಅವರು ಫ್ರಾನ್ಸ್‌ ರಾಯಭಾರ ಕಚೇರಿಗೆ ಭೇಟಿ ನೀಡಲಿರುವ ಅವರು, ಅಲ್ಲಿನ ಸಿಬ್ಬಂದಿ ಜೊತೆ ಮಾತುಕತೆ ನಡೆಸಲಿದ್ದಾರೆ. ಸಂಜೆ 7.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಬಳಿಕ  ರಾಷ್ಟ್ರಪತಿ ಭವನದಲ್ಲಿ ರಾತ್ರಿ ನಡೆಯುವ ಭೋಜನ ಕೂಟದಲ್ಲಿ  ಭಾಗಿಯಾಗಲಿದ್ದಾರೆ.

Shwetha M