ಫ್ರೀ ಬಸ್‌ ಎಫೆಕ್ಟ್‌ -ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಜೊತೆ ಪುರುಷ ಪ್ರಯಾಣಿಕರ ಸಂಖ್ಯೆಯೂ ಡಬಲ್‌!

ಫ್ರೀ ಬಸ್‌ ಎಫೆಕ್ಟ್‌ -ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಜೊತೆ ಪುರುಷ ಪ್ರಯಾಣಿಕರ ಸಂಖ್ಯೆಯೂ ಡಬಲ್‌!

ಬೆಂಗಳೂರು: ಮಹಿಳೆಯರ ಉಚಿತ ಬಸ್‌ ಪ್ರಯಾಣ ಆರಂಭವಾಗಿ ಸುಮಾರು 22 ದಿನಗಳಾಗಿವೆ. ಫ್ರೀ ಬಸ್‌ ಪ್ರಯಾಣ ಆರಂಭವಾದ ಮೇಲೆ 10 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಯೋಜನೆ ಜಾರಿಯಾದ ಮೇಲೆ ಮಹಿಳೆಯರ ಓಟಾಟ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರ ಓಡಾಟ ಕಡಿಮೆಯಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಕೆಎಸ್‌ಆರ್‌ಟಿ ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ. ಮಹಿಳೆಯರ ಉಚಿತ ಬಸ್‌ ಪ್ರಯಾಣ ಆರಂಭವಾದ ಮೇಲೆ ಪುರುಷರ ಓಡಾಟವೂ ಹೆಚ್ಚಾಗಿದೆ. ಇಷ್ಟೇ ಅಲ್ಲದೆ ಸಾರಿಗೆ ಬಸ್ ನಲ್ಲಿ ಪುರುಷರ ಓಡಾಟದಿಂದ ಬರುತ್ತಿರುವ ಆದಾಯವೂ ಡಬಲ್‌ ಆಗಿದೆ.

ಇದನ್ನೂ ಓದಿ: ವಿದ್ಯುತ್‌ ಬಿಲ್‌ ಕಟ್ಟದೇ ಬಾಕಿ ಇದ್ದರೂ ಗೃಹಜ್ಯೋತಿ ಲಾಭ ಪಡೆಯಬಹುದು! – ಬಾಕಿ ಕಟ್ಟಲು ಗಡುವು ಯಾವಾಗ?

ಮಹಿಳೆಯರ ಉಚಿತ ಬಸ್‌ ಪ್ರಯಾಣ ಆರಂಭಕ್ಕೂ ಮುನ್ನ ನಿತ್ಯ 42 ಲಕ್ಷ ಪುರುಷರು ಸಾರಿಗೆ ಬಸ್‍ನಲ್ಲಿ ಸಂಚರಿಸುತ್ತಿದ್ದರು. ಆದರೆ ಶಕ್ತಿ ಯೋಜನೆ ಜಾರಿ ಬಳಿಕ ನಿತ್ಯ ಸರಾಸರಿ 55 ಲಕ್ಷ ಪುರುಷರ ಓಡಾಟ ಜಾಸ್ತಿಯಾಗಿದೆ. ಅಂದರೆ ದಿನಕ್ಕೆ ಸರಾಸರಿ 13 ಲಕ್ಷ ಹೆಚ್ಚಳವಾಗಿದ್ದು, ಗಮನಾರ್ವಾಗಿ ಪುರುಷರ ಓಡಾಟ ಹೆಚ್ಚಾಗಿದೆ ಎಂದು ಕೆಎಸ್‌ಆರ್‌ಟಿ ಮಾಹಿತಿ ನೀಡಿದೆ.

ಪುರುಷ ಪ್ರಯಾಣಿಕರ ಓಡಾಟ ಸಂಖ್ಯೆ ಹೆಚ್ಚಾದಂತೆ ಆದಾಯ ಕೂಡ ಹೆಚ್ಚಾಗಿದೆ. ಸಾರಿಗೆ ಸಂಸ್ಥೆಗೆ ಕಳೆದ 19 ದಿನದಲ್ಲಿ ಪುರುಷರ ಪ್ರಯಾಣದಿಂದ 302 ಕೋಟಿ ಆದಾಯ ಹರಿದು ಬಂದಿದೆ. ಶಕ್ತಿ ಯೋಜನೆ ಜಾರಿಗೂ ಮುನ್ನ ನಿತ್ಯ 24.48 ಕೋಟಿ ಆದಾಯ ಬರುತ್ತಿತ್ತು. ಆಗ ಪುರುಷರ ಓಡಾಟದಿಂದ ಸಾರಿಗೆ ಸಂಸ್ಥೆಗೆ 12 ಕೋಟಿ ಆದಾಯ ಬರುತ್ತಿತ್ತು. ಈಗ 16.87 ಕೋಟಿ ಗೆ ಗಂಡಸರ ಸಂಚಾರದ ಆದಾಯ ಹೆಚ್ಚಾಗಿದೆ.

ಪುರುಷ ಪ್ರಯಾಣಿಕರ ಸಂಖ್ಯೆ ದಿಢೀರ್‌ ಆಗಿ ಏರಿಕೆಯಾಗಲು ಪ್ರಮುಖ ಕಾರಣ ಕುಟುಂಬದವರು ಒಟ್ಟಾಗಿ ಪ್ರಯಾಣ ಮಾಡುವಾಗ ಮಹಿಳೆಯರಿಗೆ ಇದೆಯಲ್ಲ. ಹೀಗಾಗಿ ಹೊರೆ ಕಡಿಮೆಯಾಗುತ್ತದೆ ಎಂಬ ಉದ್ದೇಶದಿಂದ ಸಾರಿಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾರೆ. ರಶ್ ಆದರೂ ಏನು ಮಾಡೋಕೆ ಆಗದೇ ಅಡ್ಜೆಸ್ಟ್ ಮಾಡಿಕೊಂಡು ಅದೇ ಬಸ್ ನಲ್ಲಿ ಓಡಾಟ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಷ್ಟವಾದರೂ ಸಾಮಾನ್ಯವಾಗಿ ದಿನನಿತ್ಯದಂತೆ ಸರ್ಕಾರಿ ಬಸ್‍ಗಳನ್ನೇ ಬಳಕೆ ಮಾಡುವವರು ಅದನ್ನೆ ಮುಂದುವರಿಸಿದ್ದಾರೆ. ಹೀಗಾಗಿ ಸಾರಿಗೆ ಬಸ್‌ಗಳಲ್ಲಿ ಪುರುಷ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಒಟ್ಟಾರೆ ಒತ್ತಡ, ರಶ್, ಗಲಾಟೆ ಗದ್ದಲ ನಡುವೆಯೂ ಹೆಚ್ಚಿನ ಪುರುಷರು ಸಾರಿಗೆ ಬಸ್ ನಲ್ಲಿ ಓಡಾಡಿ, ನಿಗಮಗಳಿಗೆ ಇನ್ನಷ್ಟು ಲಾಭ ಹೆಚ್ಚಿಸಿರೋದು ನಿಜಕ್ಕೂ ವಿಶೇಷವೇ ಸರಿ.

suddiyaana