ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಸ್ಕೂಟರ್!
ಅಸ್ಸಾಂ: ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಘೋಷಿಸಿದ್ದಾರೆ. ಹೈಯರ್ ಸೆಕೆಂಡರಿ ಪರೀಕ್ಷೆಗಳಲ್ಲಿ ಮೆರಿಟ್ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಮತ್ತೊಂದು ಪ್ಲಾನ್ – ಸುರಂಗ ನಿರ್ಮಿಸಲು ಸಜ್ಜಾಗುತ್ತಿದೆ ಸರ್ಕಾರ?
ಸಿಎಂ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 12ನೇ ತರಗತಿ ಪರೀಕ್ಷೆಯಲ್ಲಿ ಶೇ.60 ಅಂಕ ಪಡೆದ ಬಾಲಕಿಯರು ಮತ್ತು ಶೇ.75 ಅಂಕ ಪಡೆದ ಬಾಲಕರಿಗೆ ಉಚಿತ ಸ್ಕೂಟರ್ ವಿತರಿಸಲಾಗುವುದು. 12ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರಿಗೆ ಸಚಿವ ಸಂಪುಟವು ಇದಕ್ಕಾಗಿ ರೂ.167 ಕೋಟಿಗಳನ್ನು ನಿಗದಿಪಡಿಸಿದೆ. ಇದಲ್ಲದೇ ಸೆಪ್ಟೆಂಬರ್‌ನಿಂದ ತಿಂಗಳಿಗೆ 1250 ರೂಪಾಯಿಯಂತೆ 7 ಲಕ್ಷ ಜನರಿಗೆ ಆರ್ಥಿಕ ನೆರವನ್ನು ಅಸ್ಸಾಂ ಸರ್ಕಾರ ಒದಗಿಸಲಿದೆ ಎಂದು ಅಸ್ಸಾಂ ಪ್ರವಾಸೋದ್ಯಮ ಸಚಿವ ಜಯಂತ್ ಮಲ್ಲಾ ಬರೂಹ್ ಮಾಹಿತಿ ನೀಡಿದ್ದಾರೆ.
ಇನ್ನು ಸರ್ಕಾರಿ ಮತ್ತು ಪ್ರಾಂತೀಯ ಶಾಲೆಗಳಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ 3.78 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ 167 ಕೋಟಿ ರೂ. ಮೀಸಲಿಡಲಾಗಿದೆ. ಇದಲ್ಲದೇ ಅಸ್ಸಾಂನಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಆಯೋಜಿಸಲು ಕ್ರಮಕೈಗೊಳ್ಳುವಂತೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆಗೆ ಮನವಿ ಮಾಡಲಾಗಿದೆ. ಅಸ್ಸಾಂ ರಾಜ್ಯದ ಕೃಷಿ ವಿಶ್ವವಿದ್ಯಾಲಯದಲ್ಲಿ 27% ಸೀಟುಗಳನ್ನು ಒಬಿಸಿಗೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.