KSRTC ಗೆ ತಲೆನೋವಾದ ಮಹಿಳೆಯರಿಗೆ ಉಚಿತ ಪ್ರಯಾಣ – ಸಿಎಂಗೆ ಪತ್ರ ಬರೆದ ಸಂಸ್ಥೆ

KSRTC ಗೆ ತಲೆನೋವಾದ ಮಹಿಳೆಯರಿಗೆ ಉಚಿತ ಪ್ರಯಾಣ – ಸಿಎಂಗೆ ಪತ್ರ ಬರೆದ ಸಂಸ್ಥೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಐದು ಗ್ಯಾರಂಟಿಗಳನ್ನು ಘೋಷಿಸಿ ಈ ಬಾರಿಯ ಚುನಾವಣೆಯನ್ನು ಗೆದ್ದಿದೆ. ಆದರೆ ಕಾಂಗ್ರೆಸ್‌ ಈ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದ್ದರೆ, ಇತ್ತ ಜನರು ಈ ಗ್ಯಾರಂಟಿಗಳನ್ನು ಗಂಭೀರವಾಗಿ ತೆಗೆದು ಕೊಂಡು ಕರೆಂಟ್‌ ಬಿಲ್‌ ಕಟ್ಟಲು, ಮಹಿಳೆಯರು ಬಸ್‌ ಟಿಕೆಟ್‌ ಪಡೆಯಲು ನಕಾರ ಮಾಡುತ್ತಿದ್ದಾರೆ. ಇದು ಆ ಇಲಾಖೆಯ ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದೀಗ ಕೆಎಸ್‌ಆರ್‌ಟಿಸಿ ಸಂಸ್ಥೆಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಮಹಿಳೆಯರಿಗೆ ಉಚಿತ ಪ್ರಯಾಣ ಗ್ಯಾರೆಂಟಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಇನ್ನೂ ಮೂಡದ ಒಮ್ಮತ – ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಸರತ್ತು

ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಸಿಬ್ಬಂದಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕರಾರಸಾನಿ ಸಂಸ್ಥೆಯಿಂದ ಬೇಗನೇ ನಿರ್ಧಾರ ತೆಗೆದುಕೊಳ್ಳುವಂತೆ ಕೋರಿ ಪತ್ರ ಬರೆದಿದ್ದಾರೆ. ಈಗಾಗಲೇ ಕೆಲ ಮಹಿಳೆಯರು ಬಸ್ಸಿನಲ್ಲಿ ಹಣ ನೀಡಲು ನಿರಾಕರಿಸುತ್ತಿದ್ದು ಇದರಿಂದಾಗಿ ಟಿಕೆಟ್ ಹಣ ಪಡೆಯುವುದೇ ಸಾಹಸಾಗಿದೆ. ಹೀಗಾಗಿ ಶೀಘ್ರದಲ್ಲೇ ಸರ್ಕಾರ ಯೋಜನೆ ಜಾರಿಗೆ ತರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಬೇಕು ಎಂದು ಸಿಎಂಗೆ ಸಾರಿಗೆ ಯೂನಿಯನ್ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಪತ್ರ ಬರೆದಿದ್ದಾರೆ. ಜೊತೆಗೆ ಈ ಯೋಜನೆ ಜಾರಿಯಿಂದ ನಿಗಮಕ್ಕಾಗುವ ಹೊರೆಯನ್ನು ಸರ್ಕಾರ ಮುಂಗಡವಾಗೇ ಹಣ ಬಿಡುಗಡೆ ಮಾಡಿ ಪಾವತಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಕಾಂಗ್ರೆಸ್‌ ಚುನಾವಣೆ ಗೆಲ್ಲಲು ಪ್ರನಾಳಿಕೆಯಲ್ಲಿ ಜನಪ್ರಿಯ ಯೋಜನೆ ಯೋಜನೆಗಳನ್ನೇನೋ ಘೋಷಿಸಿದೆ. ಆದರೆ ಈಗ ಅದೇ ಮುಳುವಾಗುವ ಸಾಧ್ಯತೆ ಕಂಡು ಬರುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್ ಫ್ರೀ ಕರೆಂಟ್, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಭರವಸೆ ತೀವ್ರ ಕಗ್ಗಂಟಾಗಿ ಪರಿಣಮಿಸಿದೆ.

suddiyaana