ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ – ಗುಂಡಿನ ದಾಳಿಗೆ ಇಬ್ಬರು ಬಲಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ – ಗುಂಡಿನ ದಾಳಿಗೆ ಇಬ್ಬರು ಬಲಿ

ಮಣಿಪುರದಲ್ಲಿ ಪದೇ ಪದೆ ಹಿಂಸಾಚಾರ ನಡೆಯುತ್ತಲೇ ಇದೆ. ಬುಧವಾರ ಮತ್ತೆ ಮಣಿಪುರ ಖೋರೆಂಟಾಕ್ ಗ್ರಾಮದಲ್ಲಿ ತೀವ್ರ ಹಿಂಸಾಚಾರ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಕುಕಿ-ಜೋ ಗ್ರಾಮದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಬೆಳಗ್ಗೆ 10 ಗಂಟೆ ವೇಳೆಗೆ ದಾಳಿ ನಡೆಸಿದೆ. ಈ ವೇಳೆ ಅಲ್ಲಿನ ಗ್ರಾಮಸ್ಥರು ದುಷ್ಕರ್ಮಿಗಳ ಮೇಲೆ ಪ್ರತಿದಾಳಿ ನಡೆಸಿದ್ದು, ಎರಡು ಗುಂಪುಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಐದು ಕಣಿವೆ ಜಿಲ್ಲೆಗಳ ಫ್ರಿಂಜ್ ಮತ್ತು ದುರ್ಬಲ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೆ ಖ್ಯಾತೆ ತೆಗೆದ ಚೀನಾ – ಅಕ್ಸಾಯ್‌ ಚಿನ್‌ ಪ್ರದೇಶದಲ್ಲಿ ಚೈನೀಸ್ ಬಂಕರ್‌, ಸುರಂಗ ಪತ್ತೆ!

ಆಗಸ್ಟ್ 27 ರಂದು  ಮಣಿಪುರದ ರಾಜಧಾನಿ ಇಂಫಾಲ್‌ನ ನ್ಯೂ ಲಂಬುಲೇನ್ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಮೂರು ಮನೆಗಳಿಗೆ ಬೆಂಕಿ ಹಚ್ಚಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ, ಅದೇ ದಿನ ಮುಂಜಾನೆ 2 ಗಂಟೆ ಸುಮಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಜಿ ನಿರ್ದೇಶಕ ಕೆ ರಾಜೋ ಅವರ ನಿವಾಸವನ್ನು ಕಾವಲು ಕಾಯುತ್ತಿದ್ದ ಭದ್ರತಾ ಸಿಬ್ಬಂದಿಯಿಂದ ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದ್ದರು.

ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯಿಂದ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.

suddiyaana