ದೆಹಲಿ ಪ್ರವೇಶಿಸಿದ ಭಾರತ್ ಜೋಡೋ – ಬಿಜೆಪಿ ನಾಯಕರಿಗೆ ಬಹಿರಂಗ ಆಹ್ವಾನ ನೀಡಿದ ಕಾಂಗ್ರೆಸ್

ದೆಹಲಿ ಪ್ರವೇಶಿಸಿದ ಭಾರತ್ ಜೋಡೋ – ಬಿಜೆಪಿ ನಾಯಕರಿಗೆ ಬಹಿರಂಗ ಆಹ್ವಾನ ನೀಡಿದ ಕಾಂಗ್ರೆಸ್

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಬೆಳಗ್ಗೆ ದೆಹಲಿಗೆ ತಲುಪಿದೆ.  ಕೋವಿಡ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರಿಗೂ ಬಹಿರಂಗ ಆಹ್ವಾನವಿದೆ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಚೀನಾದಲ್ಲಿ ಒಂದೇ ದಿನ 3.7 ಕೋಟಿ ಪಾಸಿಟಿವ್ ಕೇಸ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ದೇಶವು ಮತ ಚಲಾಯಿಸಿದಾಗ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. 2024 ರ ಸಾರ್ವತ್ರಿಕ ಚುನಾವಣೆಗೆ ಜನರು ತಮ್ಮ ಆಯ್ಕೆಯನ್ನು ಸ್ಪಷ್ಟಪಡಿಸಿದ್ದಾರೆ. 2024ನೇ ವರ್ಷ ಮಾತ್ರ ಯಾರು ಗೆಲ್ಲುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ಆದರೆ ನೀವು ನಮ್ಮನ್ನು ಕೇಳಿದರೆ, ನಮಗೆ ರಾಹುಲ್ ಗಾಂಧಿ ಬೇಕು’ ಎಂದು ಎಂದು ಹೇಳಿದ್ದಾರೆ.

ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಬಿಜೆಪಿ ಪಕ್ಷದ ನಾಯಕರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. ‘ಕೇಂದ್ರ ಸಚಿವ ನಿತಿನ್ ಗಡ್ಕರಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಥವಾ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾರತ್ ಜೋಡೋ ಯಾತ್ರೆಗೆ ಸೇರಲು ನಮ್ಮ ಸ್ವಾಗತವಿದೆ. ಭಾರತವನ್ನು ಒಗ್ಗೂಡಿಸಲು ಮತ್ತು ದ್ವೇಷವನ್ನು ದೂರವಿಡಲು ನಂಬುವ ಯಾರಾದರೂ ಈ ಯಾತ್ರೆಗೆ ಸೇರಲು ಸ್ವಾಗತಾರ್ಹ’ ಎಂದು ತಿಳಿಸಿದ್ದಾರೆ.

suddiyaana