ಕರಾವಳಿ ಚಿತ್ರದ ಕಾಂಟ್ರವರ್ಸಿಗೆ ಫುಲ್‌ಸ್ಟಾಪ್ – ಪ್ರಚಾರದಲ್ಲಿ ಬ್ಯುಸಿಯಾದ ಪ್ರಜ್ವಲ್ ದೇವರಾಜ್
ಕರಾವಳಿ ಟ್ರೇಲರ್ ಗಲಾಟೆ - ಪ್ರಜ್ವಲ್ ದೇವರಾಜ್ ಸಹಾಯಕರ ವಿರುದ್ಧವೇ ಎಫ್ಐಆರ್

ಕರಾವಳಿ ಸಿನಿಮಾದ ವಿವಾದ ಸದ್ಯಕ್ಕೆ ತಣ್ಣಗಾಗಿದೆ. ಚಿತ್ರತಂಡದ ಜೊತೆ ಮುನಿಸು ಮರೆತು ಪ್ರಜ್ವಲ್ ದೇವರಾಜ್ ಪ್ರಚಾರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೊಂದೆಡೆ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ:ಕರಾವಳಿ ಸಿನಿಮಾ ಟ್ರೈಲರ್ ಲಾಂಚ್ ವೇಳೆ ಕಿರಿಕ್ – ಪ್ರಜ್ವಲ್ ದೇವರಾಜ್‌ಗೆ ಖಡಕ್ ಸಂದೇಶ ಕೊಟ್ಟ ರಾಜ್ ಬಿ ಶೆಟ್ಟಿ
ಕರಾವಳಿ ಚಿತ್ರ ಸಿನಿಮಾ ತೆರೆಗೆ ಕೌಂಟ್‌ಡೌನ್ ಶುರುವಾಗಿದೆ. ಜುಲೈ ತಿಂಗಳ 24 ರಂದು ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾ ಪ್ರಚಾರದ ಕಾರ್ಯದಲ್ಲಿ ನಟ ಪ್ರಜ್ವಲ್ ದೇವರಾಜ್ ಬ್ಯುಸಿಯಾಗಿದ್ದಾರೆ. ಈ ಬೆಳವಣಿಗೆ ನೋಡಿದ ಅಭಿಮಾನಿಗಳು ಸದ್ಯ ವಿವಾದ ತಣ್ಣಗಾಗಿದೆ ಎಂದು ಸಮಧಾನ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಟ್ರೇಲರ್ ಬಿಡುಗಡೆ ದಿನ ನಡೆದ ಗಲಾಟೆಯ ಬಗ್ಗೆ ವಿಚಾರಣೆ ಮುಂದುವರೆದಿದೆ.
ಬಾಕಿ ಸಂಭಾವನೆ ವಿಚಾರವಾಗಿ ನಟನ ಪ್ರಚೋದನೆಯಿಂದಲೇ ಈ ರಾದ್ಧಾಂತ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಉಪ್ಪಾರಪೇಟೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಆಪ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿತ್ರದ ಕಾರ್ಯಕಾರಿ ನಿರ್ಮಾಪಕ ಅಂಕಿತ್ ಅವರು ನೀಡಿದ ದೂರಿನ ಆಧಾರದ ಮೇಲೆ ದಿಲೀಪ್, ಅವಿನಾಶ್ ಮತ್ತು ನಂದಕುಮಾರ್ ಎಂಬ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘ಆರೋಪಿಗಳು ಉದ್ದೇಶಪೂರ್ವಕವಾಗಿಯೇ ಟ್ರೇಲರ್ ರಿಲೀಸ್ ಆಗುವ ಸ್ಥಳಕ್ಕೆ ನುಗ್ಗಿದ್ದಾರೆ. ಗುಂಪು ಸೇರಿಕೊಂಡು ನಿರ್ದೇಶಕ, ನಿರ್ಮಾಪಕ ಹಾಗೂ ಅಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ ತೊಂದರೆ ಕೊಟ್ಟಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಅಂದು ಗಲಾಟೆ ಮಾಡಿದ ದಿಲೀಪ್, ಅವಿನಾಶ್ ಮತ್ತು ನಂದಕುಮಾರ್ ಕೇವಲ ಅಭಿಮಾನಿಗಳಲ್ಲ, ಬದಲಾಗಿ ಅವರು ಪ್ರಜ್ವಲ್ ದೇವರಾಜ್ ಅವರ ಜೊತೆಯಲ್ಲೇ ಕೆಲಸ ಮಾಡುವ ಸಹಾಯಕರು ಎಂಬ ವಿಚಾರ ಪೊಲೀಸರು ಬಹಿರಂಗ ಪಡಿಸಿದ್ದಾರೆ. ಇವರು ಕರಾವಳಿ ಸಿನಿಮಾದ ಶೂಟಿಂಗ್ ಸಮಯದಲ್ಲೂ ಪ್ರಜ್ವಲ್ ಅವರಿಗೆ ಸಹಾಯಕರಾಗಿ ಕೆಲಸ ಮಾಡಿದ್ದರು ಎನ್ನಲಾಗಿದೆ. ಸಂಭಾವನೆ ಸಿಕ್ಕಿಲ್ಲ ಎಂಬ ಕಾರಣಕ್ಕೆ ಕಾರಣಕ್ಕೆ ಸ್ವತಃ ನಟ ಪ್ರಜ್ವಲ್ ದೇವರಾಜ್ ಅವರೇ ತಮ್ಮ ಸಹಾಯಕರನ್ನು ಎತ್ತಿಕಟ್ಟಿ ಈ ಗಲಾಟೆ ಮಾಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ನೋಡಿರಿ

