ರವೀಂದ್ರ ಕಲಾಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ!

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿನ್ನೆ ವಿಧಿವಶರಾಗಿದ್ದಾರೆ. ಇಂದು ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ಈ ಬಗ್ಗೆ ಸಾಲುಮರದ ತಿಮ್ಮಕ್ಕ ಅವರ ಸಾಕು ಮೊಮ್ಮಗ ಉಮೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಅಶ್ವಿನಿ & ಗ್ಯಾಂಗ್ ಪ್ಲ್ಯಾನ್ ವರ್ಕೌಟ್? – ಈ ವಾರದ ಕಳಪೆ ಮಾಳು!
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಶುಕ್ರವಾರ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಸಾಲುಮರದ ತಿಮ್ಮಕ್ಕರವರ ಅಂತಿಮ ದರ್ಶನವನ್ನ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಡೆದುಕೊಂಡಿದ್ದಾರೆ. ಇವತ್ತು ಮಧ್ಯಾಹ್ನ 12 ಗಂಟೆಗೆ ಜ್ಞಾನಭಾರತಿ ಬಳಿ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಾಕು ಮೊಮ್ಮಗ ಉಮೇಶ್ ತಿಳಿಸಿದ್ದಾರೆ.
ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಹುಲಿಕಲ್ ಗ್ರಾಮದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಹಾಸನದ ಬೇಲೂರಿನಲ್ಲಿ 1 ಗಂಟೆ ಕಾಲ ಅಂತಿಮ ದರ್ಶನಕ್ಕೆ ಇಡಲಾಯ್ತು. ಬೇಲೂರಿನ ಮೂಲಕ ಬೆಂಗಳೂರಿಗೆ ಬೆಳಗ್ಗೆ 8 ಗಂಟೆ ವೇಳೆಗೆ ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರಕ್ಕೆ ಕರೆತರಲಾಗಿದೆ. ಇವತ್ತು ಬೆಳಗ್ಗೆ 8 ಗಂಟೆಯಿಂದಲೇ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮದ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ವೇಳೆ ಸಿಎಂ, ಡಿಸಿಎಂ ಭಾಗಿಯಾಗಲಿದ್ದಾರೆ.

ನೋಡಿರಿ

