ಸರ್ಕಾರಿ ಗೌರವಗಳೊಂದಿಗೆ ಶಾಸಕ ರಾಜಾ ವೆಂಕಟಪ್ಪನಾಯಕರಿಗೆ ವಿದಾಯ – ರಾಜಮನೆತನದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಶಾಸಕ ರಾಜಾ ವೆಂಕಟಪ್ಪನಾಯಕರಿಗೆ ವಿದಾಯ – ರಾಜಮನೆತನದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ

ಬಹು ಅಂಗಾಂಗಳ ವೈಫಲ್ಯದಿಂದ ನಿಧನರಾಗಿದ್ದ ಕಾಂಗ್ರೆಸ್‌ನ ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಅಂತ್ಯಕ್ರಿಯೆ ನೆರವೇರಿದೆ. ಸುರಪುರ ನಗರದ ರಾಜ ಕುಟುಂಬದ ಸ್ಮಶಾನ ಜಾಗದಲ್ಲಿ ರಾಜಮನೆತನದ ವಿಧಿವಿಧಾನಗಳ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

ಇದನ್ನೂ ಓದಿ: ಚುನಾವಣೆ ಘೋಷಣೆಗೂ ಮೊದಲೇ ಡಿ.ಕೆ ಬ್ರದರ್ಸ್ ಅಕ್ರಮ! – ಹೆಚ್‌.ಡಿ ಕುಮಾರಸ್ವಾಮಿ ಗಂಭೀರ ಆರೋಪ

ಅಂತ್ಯ ಸಂಸ್ಕಾರಕ್ಕೂ ಮುನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್‌ ಇಲಾಖೆ ವಾದ್ಯ ಮೇಳದಿಂದ ರಾಷ್ಟ್ರಗೀತೆ ನುಡಿಸಿ, ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ಹಾಗೂ ಎರಡು ನಿಮಿಷ ಮೌನ ಆಚರಿಸಿ ರಾಜಾ ವೆಂಕಟಪ್ಪನಾಯಕ ಅವರಿಗೆ ಗೌರವ ಸಮರ್ಪಿಸಲಾಗಿದೆ. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗಿಯಾಗಿದ್ರು.

ಇನ್ನು ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಗೆದ್ದ ಬಳಿಕ ರಾಜಾ ವೆಂಕಟಪ್ಪ ನಾಯಕ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಸಚಿವ ಸ್ಥಾನ ಕೈ ತಪ್ಪಿತ್ತು. ಕೆಲವು ದಿನಗಳ ಹಿಂದೆ ಅವರನ್ನು ರಾಜ್ಯ ಉಗ್ರಾಣ ನಿಮಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಅಧ್ಯಕ್ಷರಾಗಿ ಅಧಿಕಾರವನ್ನು ಸಹ ಸ್ವೀಕಾರ ಮಾಡಿದ್ದರು.

Shwetha M