5 ರಾಜ್ಯಗಳಿಗೆ ಬಿಜೆಪಿ ನೂತನ ಅಧ್ಯಕ್ಷರ ನೇಮಕ – ಕರ್ನಾಟಕದಲ್ಲಿ ಮಹಿಳೆಗೆ ಮಣೆ ಹಾಕುತ್ತಾ ಹೈಕಮಾಂಡ್‌?

5 ರಾಜ್ಯಗಳಿಗೆ ಬಿಜೆಪಿ ನೂತನ ಅಧ್ಯಕ್ಷರ ನೇಮಕ – ಕರ್ನಾಟಕದಲ್ಲಿ ಮಹಿಳೆಗೆ ಮಣೆ ಹಾಕುತ್ತಾ ಹೈಕಮಾಂಡ್‌?

ನವದೆಹಲಿ: ತೆಲಂಗಾಣ, ಆಂಧ್ರ ಪ್ರದೇಶ, ಪಂಜಾಬ್ ಸೇರಿದಂತೆ 5 ರಾಜ್ಯಗಳಲ್ಲಿ  ಬಿಜೆಪಿ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

ಆಂಧ್ರ ಬಿಜೆಪಿ ಘಟಕಕ್ಕೆ ಮಾಜಿ ಸಿಎಂ ಎನ್ ಟಿ ಆರ್ ಪುತ್ರಿ ಪುರಂದೇಶ್ವರಿ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕಿಶನ್ ರೆಡ್ಡಿ, ಜಾರ್ಖಂಡ್ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಾಬುಲಾಲ್ ಮುರೂಡಿ, ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸುನೀಲ್ ಜಾಖರ್, ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷರಾಗಿ ಗಜೇಂದ್ರ ಸಿಂಗ್ ಅವರನ್ನು ನೇಮಕಮಾಡಲಾಗಿದೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ‘ಯಡಿಯೂರಪ್ಪ ರೆಸ್ಟ್ ತೆಗೆದುಕೊಳ್ಳಲಿ’ ಎಂದು ಡಿಕೆಶಿ ಟಾಂಗ್..!

ರಾಜ್ಯದಲ್ಲಿ ಕೂಡ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಈ ಹಿಂದೆಯೇ ಕೇಳಿಬಂದಿತ್ತು. ಆದರೆ ಇದು ಊಹಪೋಹ ಎಂದು ಹೇಳಲಾಗಿತ್ತು. ಈ ನಡುವೆ ಇದೀಗ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರು ಕೂಡ ಕೇಳಿ ಬರುತ್ತಿದೆ.

ಶೋಭಾ ಕರಂದ್ಲಾಜೆ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿರುವ ವಿಚಾರ ಸಂಬಂಧ ಬಿಜೆಪಿ ಕಚೇರಿಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿ, ಮಹಿಳೆಯರು ಯಾಕೆ ರಾಜ್ಯಾಧ್ಯಕ್ಷರು ಆಗಬಾರದು? ಎಲ್ಲಾ ಕಡೆಯೂ ಮಹಿಳೆಯರು ಇರಬೇಕು. ಹಾಗೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮಹಿಳೆಯರು ಇರಬೇಕು. ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಆಯ್ಕೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರು ಯಾರಾಗಬೇಕೆಂದು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾರೇ ಆದರೂ ಅವರ ಜೊತೆ ನಾವು ಒಟ್ಟಾಗಿ ಹೋಗುತ್ತೇವೆ ಎಂದು ಹೇಳಿದರು.

 

suddiyaana