6 ಗಂಟೆಗಳ ಶಸ್ತ್ರಚಿಕಿತ್ಸೆ ಬಳಿಕ ಜೀವ ಹೋಯ್ತು! – ಅಂತ್ಯಕ್ರಿಯೆ ವೇಳೆ ಕಣ್ಣು ತೆರೆದ ವ್ಯಕ್ತಿ!

ಗದಗ ಜಿಲ್ಲೆಯ ಬೆಟಗೇರಿಯಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು 6 ಗಂಟೆ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟದ್ದಾರೆ. ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಅನ್ನುವಷ್ಟರಲ್ಲಿ ಮತ್ತೆ ಉಸಿರಾಡಿ ಕಣ್ತೆರೆದ ಘಟನೆ ನಡೆದಿದೆ.
ಇದನ್ನೂ ಓದಿ: ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ! – ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಮರುಜನ್ಮ ಪಡೆದ ವ್ಯಕ್ತಿ ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಎಂದು ಗುರುತಿಸಲಾಗಿದೆ. ಕಳೆದ ಕೆಲ ಸಮಯದಿಂದ ನಾರಾಯಣ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಾರಾಯಣ ಅವರು ಪಿತ್ತಕೋಶದ ಸಮಸ್ಯೆಯಿಂದ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 6 ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಶಸ್ತ್ರಚಿಕಿತ್ಸೆ ಫಲಕಾರಿಯಾಗದೇ ನಾರಾಯಣ ಸಾವನ್ನಪ್ಪಿದ್ದರು. ಬಳಿಕ ಕುಟುಂಬಸ್ಥರು ಗದಗ ಜಿಲ್ಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಅಲ್ಲದೇ ಗದಗ-ಬೆಟಗೇರಿಯಲ್ಲಿ ಶ್ರದ್ಧಾಂಜಲಿಯ ಬ್ಯಾನರ್ ಕೂಡ ಕಟ್ಟಿದ್ದರು. ಅಂತ್ಯಸಂಸ್ಕಾರಕ್ಕೆ ಬಂಧು ಭಾಂದವರು ಸಹ ಬಂದಿದ್ದರು.
ನಾರಾಯಣ ಅವರ ದೇಹವನ್ನು ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ಮೂಲಕ ಮನೆಗೆ ತಂದಿದ್ದಾರೆ. ಆದರೆ ಮನೆಗೆ ಬರುತ್ತಿದ್ದಂತೆ ನಾರಾಯಣ ಅವರು ಮತ್ತೆ ಉಸಿರಾಡಿ, ಕಣ್ಣು ಬಿಟ್ಟಿದ್ದಾರೆ. ಇದನ್ನು ಕಂಡು ಕುಟುಂಬಸ್ಥರು ಶಾಕ್ ಆಗಿದ್ದಾರೆ. ಕೂಡಲೇ ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ. ಸದ್ಯ ಇದನ್ನ ಕಂಡ ಸ್ಥಳೀಯರು ಇದು ದೇವರ ಪವಾಡವೇ ನಡೆದಿದೆ ಎಂದು ಹೇಳುತ್ತಿದ್ದಾರೆ. ನಾರಾಯಣ ಬೇಗ ಗುಣಮುಖರಾಗಿ ಬರಲಿ ಎಂದು ಕುಟುಂಬಸ್ಥರು, ಸ್ನೇಹಿತರು, ಬಂದು ಬಾಂಧವರು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

ನೋಡಿರಿ

