ಹೆಡ್ ಕೋಚ್ ಆಗಿ ದಾದಾ ಬಂದಾಯ್ತು… ಕಪ್ ಗೆಲ್ಲುತ್ತಾ ಡೆಲ್ಲಿ?

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ‘ದಾದಾ’ ಎಂದೇ ಖ್ಯಾತರಾಗಿರುವ ಸೌರವ್ ಗಂಗೂಲಿ ಅವರಿಗೆ ಐಪಿಎಲ್ನಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿ ಸಿಕ್ಕಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಗಂಗೂಲಿ ನೇಮಕಗೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆಡಳಿತ ಮಂಡಳಿ ಈ ನೇಮಕವನ್ನು ಅಧಿಕೃತವಾಗಿ ಪ್ರಕಟಿಸಿದೆ.
ಈ ಜವಾಬ್ದಾರಿ ಸ್ವೀಕರಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸೌರವ್ ಗಂಗೂಲಿ, ಐಪಿಎಲ್ನಲ್ಲಿ ಮುಖ್ಯ ಕೋಚ್ ಆಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಅಪಾರ ಸಂತೋಷ ತಂದಿದೆ ಎಂದು ಹೇಳಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತಮ್ಮ ಹೃದಯಕ್ಕೆ ಅತ್ಯಂತ ಹತ್ತಿರವಾದ ತಂಡವಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ವೈಭವ್ ಔಟ್.. ಬುಮ್ರಾಗೆ ರೆಸ್ಟ್? – T-20Iಗೆ ಕುಲ್ದೀಪ್ ಕಂ ಬ್ಯಾಕ್
ಈ ಹಿಂದೆ ಗಂಗೂಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ತಂಡದ ಆಟಗಾರರು, ಆಡಳಿತ ವ್ಯವಸ್ಥೆ ಹಾಗೂ ಫ್ರಾಂಚೈಸಿಯ ಕಾರ್ಯವೈಖರಿ ಬಗ್ಗೆ ಅವರಿಗೆ ಉತ್ತಮ ಅರಿವಿದೆ. ಇದೀಗ ಕೋಚ್ ಆಗಿ ಅವರು ತಂಡವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ಹೊತ್ತಿದ್ದಾರೆ.
ಭಾರತದ ಪರ ನಾಯಕನಾಗಿ ಹಲವು ಐತಿಹಾಸಿಕ ಗೆಲುವುಗಳನ್ನು ತಂದುಕೊಟ್ಟಿದ್ದ ಗಂಗೂಲಿ, ಯುವ ಆಟಗಾರರನ್ನು ಬೆಳೆಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅನುಭವ ಮತ್ತು ಆಕ್ರಮಣಕಾರಿ ಕ್ರಿಕೆಟ್ ದೃಷ್ಟಿಕೋನ ಡೆಲ್ಲಿ ಕ್ಯಾಪಿಟಲ್ಸ್ಗೆ ದೊಡ್ಡ ಬಲವಾಗುವ ನಿರೀಕ್ಷೆಯಿದೆ.
ಮುಂದಿನ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದ್ದು, ಗಂಗೂಲಿ ಅವರ ನೇತೃತ್ವದಲ್ಲಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ

ನೋಡಿರಿ

