ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿದ ಯುದ್ದ ಬಿಸಿ! – ಬನಶಂಕರಿ ದೇವಾಲಯದಲ್ಲಿ ಅನ್ನ ಪ್ರಸಾದ ಬಂದ್!

ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಅನಿರೀಕ್ಷಿತ ಆಘಾತ ನೀಡಿವೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿದ್ದಂತೆ, ಪೂರೈಕೆಯಲ್ಲಿ ಅಡ್ಡಿಯಾಗುತ್ತಿದೆ. ಇದೀಗ ಯುದ್ದ ಬಿಸಿ ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿದೆ.
ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿ ಯುದ್ದದ ಎಫೆಕ್ಟ್! – ಸಿಲಿಕಾನ್ ಸಿಟಿಯಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ!
ಯುದ್ಧದ ಹಿನ್ನಲೆ ವಾಣಿಜ್ಯ IPL ಸಿಲಿಂಡರ್ ಸಿಗದ ಕಾರಣ ಬನಶಂಕರಿ ದೇವಸ್ಥಾನದಲ್ಲಿ ಪ್ರಸಾದ ಮಾಡಲು ಗ್ಯಾಸ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ 3 ಸಾವಿರದಿಂದ 4 ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಿದರೆ ಶುಕ್ರವಾರ ಹಾಗೂ ಮಂಗಳವಾರ 4 ರಿಂದ 5 ಸಾವಿರ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.
ಬೆಳಗ್ಗೆ ಭಕ್ತಾದಿಗಳಿಗೆ ಪೊಂಗಲ್, ಪುಳಿಯೊಗರೆ, ರೈಸ್ ಬಾತ್‌ಗಳನ್ನು ಪ್ರಸಾದವಾಗಿ ನೀಡಿದರೆ ಮಧ್ಯಾಹ್ನ ಅನ್ನ ಸಾಂಬರ್ ನೀಡಲಾಗುತ್ತದೆ. ಸಂಜೆ ಸಹ ಪ್ರಸಾದದ ವ್ಯವಸ್ಥೆ ಇದೆ.
ಪ್ರತಿದಿನ ಭಕ್ತಾದಿಗಳಿಗೆ ಪ್ರಸಾದ ಸಿದ್ಧತೆ ಮಾಡೋದಕ್ಕೆ ಒಂದರಿಂದ ಎರಡು ಕಮರ್ಷಿಯಲ್ ಗ್ಯಾಸ್ ಬೇಕಾಗುತ್ತದೆ. ನಮ್ಮ ಬಳಿ ಸದ್ಯ 4 ಗ್ಯಾಸ್ ಬಾಕಿ ಇದ್ದು, ಇಂದು ಹಾಗೂ ನಾಳೆ ಸಂಜೆಯರೆಗೂ ನಿರ್ವಹಣೆ ಮಾಡಬಹುದು. ಸಿಲಿಂಡರ್ ಸಿಗದೇ ಇದ್ದರೆ ಶುಕ್ರವಾರದಿಂದ ಭಕ್ತಾಧಿಗಳಿಗೆ ಪ್ರಸಾದ ನೀಡುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ದೇವಸ್ಥಾನ ತಿಳಿಸಿದೆ.

ನೋಡಿರಿ

