ರಾಜಕೀಯಕ್ಕೆ ಗೌತಮ್ ಗಂಭೀರ್ ಗುಡ್ ಬೈ -ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ನಿರ್ಧಾರ ಮಾಡಿದ್ಯಾಕೆ?
ರಾಜಕೀಯ ಕರ್ತವ್ಯದಿಂದ ತಮ್ಮನ್ನು ರಿಲೀವ್ ಮಾಡಿಕೊಡುವಂತೆ ಕೋರಿ ಸಂಸದ ಗೌತಮ್ ಗಂಭೀರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಒತ್ತಾಯಿಸಿದ್ದಾರೆ. ಮಾರ್ಚ್ 22 ರಿಂದ ಐಪಿಎಲ್ ಪಂದ್ಯಗಳು ಶುರುವಾಗಲಿದೆ. ಅದರಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಗಂಭೀರ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ನಡ್ಡಾ ಅವರಿಗೆ ತಮ್ಮನ್ನು ರಿಲೀವ್ ಮಾಡುವಂತೆ ಮನವಿ ಮಾಡಿಕೊಂಡಿರುವ ಗಂಭೀರ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: ಹೆತ್ತವರ ಜೊತೆ ರಾಂಚಿ ಟೆಸ್ಟ್ ಹೀರೋ ಧ್ರುವ್ ಜುರೆಲ್ – ತಂದೆ ತಾಯಿಗೆ ಪ್ರಶಸ್ತಿ ಅರ್ಪಣೆ
2024ರ ಲೋಕಸಭೆ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷದ ಸಂಸದ ಗೌತಮ್ ಗಂಭೀರ್ ಮಹತ್ವದ ನಿರ್ಧಾರ ಕೈಗೊಂಡು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಗೌತಮ್ ಗಂಭೀರ್ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ. ಕ್ರಿಕೆಟ್‌ನಿಂದಾಗಿ ರಾಜಕೀಯ ಹೊಣೆಗಾರಿಕೆಯಿಂದ ಮುಕ್ತಿ ಹೊಂದಲು ಬಯಸುತ್ತೇನೆ ಎಂದಿದ್ದಾರೆ.
ಗಂಭೀರ್ ಅವರ ಈ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳಿವೆ. ಇದೇ ಕಾರಣಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳಲು ಗಂಭೀರ ಈ ಪ್ಲಾನ್ ಮಾಡಿದ್ದಾರೆ ಅಂತಲೂ ಹೇಳಲಾಗುತ್ತಿದೆ. ಗೌತಮ್ ಗಂಭೀರ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿದ್ದಾರೆ.
ಗೌತಮ್ ಗಂಭೀರ್ ಶನಿವಾರ ಬೆಳಿಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್‌ನಲ್ಲಿ, ‘ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಗೌರವಾನ್ವಿತ ಅಧ್ಯಕ್ಷ ಜೆಪಿ ನಡ್ಡಾ ಜಿ ಅವರನ್ನು ವಿನಂತಿಸಿದ್ದೇನೆ ಇದರಿಂದ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದಗಳು. ಜೈ ಹಿಂದ್!’ ಎಂದು ಬರೆದುಕೊಂಡಿದ್ದಾರೆ. 2019 ರ ಲೋಕಸಭಾ ಚುನಾವಣೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದ ಅವರು, ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರು. ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅರವಿಂದರ್ ಸಿಂಗ್ ಲವ್ಲಿ ಅವರನ್ನು 3,91,222 ಮತಗಳಿಂದ ಸೋಲಿಸಿದ್ದರು.