ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿಯ ಫೈನಲ್‌ನಲ್ಲಿ ಗಿಲ್ ಆಡೋದು ಡೌಟ್

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿಯಲ್ಲಿ, ಟೀಮ್ ಇಂಡಿಯಾ ಸರಣಿ ಕ್ಲೀನ್ಸ್ವೀಪ್ ಮೇಲೆ ಕಣ್ಣಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್‌ಕೋಟ್‌ನ ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಇದೀಗ ರಾಜ್‌ಕೋಟ್‌ಗೆ ಪ್ರಯಾಣ ಬೆಳೆಸಿದ್ದಾರೆ. ಆದರೆ, ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಮೊದಲೆರಡು ಪಂದ್ಯಗಳಲ್ಲಿ ಮಿಂಚಿದ ಶುಭ್‌ಮನ್ ಗಿಲ್ ಮಾತ್ರ ಫೈನಲ್ ಪಂದ್ಯದಲ್ಲಿ ಆಡುತ್ತಿಲ್ಲ.
ಇದನ್ನೂ ಓದಿ: ಭರ್ಜರಿ ಸೆಂಚುರಿ ಬಾರಿಸಿ ಹಲವು ದಾಖಲೆಗಳನ್ನ ಸರಿಗಟ್ಟಿದ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಶುಭ್ಮನ್ ಗಿಲ್
ರಾಜ್‌ಕೋಟ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಶುಭ್‌ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎನ್ನಲಾಗುತ್ತಿದೆ. ಗಿಲ್ ಜೊತೆಗೆ ಶಾರ್ದೂಲ್ ಠಾಕೂರ್ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರಂತೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಾಗಿದೆ. ಭಾನುವಾರ ಇಂದೋರ್‌ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಮನಮೋಹಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿ ಜಯ ಸಾಧಿಸಿತು. ಶತಕವೀರ ಶುಭ್‌ಮನ್ ಗಿಲ್ ಮೂರನೇ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ. ಶುಭ್ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.
ಯುವ ಬ್ಯಾಟರ್ ಶುಭ್ಮನ್ ಗಿಲ್ ಪ್ರಸ್ತುತ ಅದ್ಭುತ ಫಾರ್ಮ್ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲೂ ತಮ್ಮ ಬ್ಯಾಟಿಂಗ್ ಪರಾಕ್ರಮವನ್ನು ಮುಂದುವರೆಸಿದ್ದಾರೆ. ಮೊಹಾಲಿಯ ತನ್ನ ತವರು ಮೈದಾನದಲ್ಲಿ ಆಡಿದ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಅವಕಾಶವನ್ನು ಕಳೆದುಕೊಂಡಿದ್ದ ಗಿಲ್, ಇಂದೋರ್‌ನಲ್ಲಿ ನಡೆದ ಎರಡನೇ ಏಕದಿನದಲ್ಲಿ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಏಕದಿನ ಕ್ರಿಕೆಟ್‌ನಲ್ಲಿ ಗಿಲ್ ಅವರ ಆರನೇ ಶತಕವಾಗಿದ್ದು, ಅದರಲ್ಲಿ 5 ಶತಕಗಳು 2023 ರಲ್ಲಿ ಮಾತ್ರ ಬಂದಿರುವುದು ವಿಶೇಷವಾಗಿದೆ. ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ವಿಶ್ವದ ಗಮನ ಸೆಳೆಯುತ್ತಿರುವ ಗಿಲ್, ಇದೀಗ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ 1 ಬ್ಯಾಟರ್ ಎನಿಸಿಕೊಳ್ಳಲು ಕೇವಲ 22 ರನ್ಗಳು ಬೇಕು. ಗಿಲ್ 22 ರನ್ ಅಥವಾ ಅದಕ್ಕೂ ಹೆಚ್ಚು ರನ್ ಬಾರಿಸಿದರೆ, ನಂಬರ್ ಒನ್ ಸ್ಥಾನದಲ್ಲಿ ರಾರಾಜಿಸಲಿದ್ದಾರೆ. ಪ್ರಸ್ತುತ 2ನೇ ಸ್ಥಾನದಲ್ಲಿರುವ ಗಿಲ್ ಪ್ರಸ್ತುತ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಝಂ ಅವರು ಐಸಿಸಿ ಏಕದಿನ ಶ್ರೇಯಾಂಕದಲ್ಲಿ 857 ರೇಟಿಂಗ್ ಅಂಕಗಳೊಂದಿಗೆ ನಂಬರ್ 1 ಬ್ಯಾಟರ್ ಎನಿಸಿಕೊಂಡಿದ್ದಾರೆ. ಆದರೆ, ಶುಭ್ಮನ್ ಗಿಲ್ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಶುಭ್‌ಮನ್ ಗಿಲ್ ಹೊರಗುಳಿಯುವುದರಿಂದ ಈ ದಾಖಲೆ ಮಾಡಲು ವಿಶ್ವಕಪ್ ಪಂದ್ಯದವರೆಗೂ ಕಾಯಲೇಬೇಕು.