ಎರಡನೇ ಚಿನ್ನಕ್ಕೆ ಗುರಿಯಿಟ್ಟ ಭಾರತ – ಶೂಟರ್‌ಗಳ ಮಡಿಲಿಗೆ ಬಂಗಾರದ ಪದಕ

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಎರಡನೇ ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ. ಶುಕ್ರವಾರ ಬೆಳಿಗ್ಗೆ, ಇಂದರ್ ಸಿಂಗ್, ಸುರುಚಿ ಮತ್ತು ಕಮಲ್‌ಜೀತ್ ಜೋಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಗುರಿಯಿಟ್ಟರು.
ಇದನ್ನೂ ಓದಿ:ಏಷ್ಯನ್ ಗೇಮ್ಸ್ ನಲ್ಲೂ ಆಡಲ್ಲ ವೈಭವ್? – ಅಭಿಷೇಕ್ & ಸಂಜುನೇ ಓಪನರ್ಸ್
ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್‌ಗಳು ಚಿನ್ನ ಗೆದ್ದಿದ್ದಾರೆ. ಶುಕ್ರವಾರ ಬೆಳಿಗ್ಗೆ ಕಮಲ್‌ಜೀತ್ ಮತ್ತು ಸುರುಚಿ ಸಿಂಗ್ ಬಂಗಾರದ ಪದಕ ಗೆದ್ದಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡದ ಫೈನಲ್‌ನಲ್ಲಿ ಸುರುಚಿ ಮತ್ತು ಕಮಲ್‌ಜೀತ್ ಜೋಡಿ ಏಷ್ಯನ್ ದಾಖಲೆಯನ್ನು ಮುರಿಯುವುದರೊಂದಿಗೆ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಗೆದ್ದುಕೊಂಡರು. ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್, ನೀರಜ್ ಕುಮಾರ್ ಮತ್ತು ರುದ್ರಾಂಕ್ಷ್ ಪಾಟೀಲ್ ಅವರ ತಂಡವು ಪುರುಷರ 50 ಮೀಟರ್ ರೈಫಲ್ 3-ಪೊಸಿಷನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿತು.
ಫೈನಲ್ ನಲ್ಲಿ ಭಾರತ, ದಕ್ಷಿಣ ಕೊರಿಯಾ, ಇರಾನ್ ಮತ್ತು ಇಂಡೋನೇಷ್ಯಾ ತಂಡಗಳು ಸ್ಪರ್ಧಿಸಿದ್ದವು. ಕಮಲ್ ಜೀತ್ ಮತ್ತು ಸುರುಚಿ ಅರ್ಹತಾ ಸುತ್ತಿನಲ್ಲೂ ಅಗ್ರಸ್ಥಾನ ಪಡೆದಿದ್ದರು. ಚಿನ್ನಗೆದ್ದ ಶೂಟರ್‌ಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ ಸಲ್ಲಿಸಿದ್ದಾರೆ.

ನೋಡಿರಿ

