ಲೌಸನ್ನೆ ಡೈಮಂಡ್ ಲೀಗ್ ಗೆದ್ದ ‘ಗೋಲ್ಡನ್ ಬಾಯ್’ – ಚಿನ್ನದ ಪದಕಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ

ಲೌಸನ್ನೆ ಡೈಮಂಡ್ ಲೀಗ್ ಗೆದ್ದ ‘ಗೋಲ್ಡನ್ ಬಾಯ್’ – ಚಿನ್ನದ ಪದಕಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ

‘ಗೋಲ್ಡನ್ ಬಾಯ್’ ನೀರಜ್ ಚೋಪ್ರಾ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ. ಲೌಸನ್ನೆ ಡೈಮಂಡ್ ಲೀಗ್​ನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ವರ್ಷ ನೀರಜ್ ಅವರಿಗೆ ಇದು ಎರಡನೇ ಚಿನ್ನದ ಪದಕವಾಗಿದೆ.  ಟೋಕಿಯೋ ಒಲಿಂಪಿಕ್‌ನಲ್ಲಿ ಚಿನ್ನಗೆದ್ದು ಭಾರತಕ್ಕೆ ಹೆಮ್ಮೆ ತಂದುಕೊಟ್ಟ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಮತ್ತೊಂದು ಸ್ವರ್ಣ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಪ್ರತಿಷ್ಠಿತ ಡೈಮಂಡ್ ಲೀಗ್ ಸ್ಪರ್ಧೆಯಲ್ಲಿ ಚಿನ್ನಕ್ಕೆ ಕೊರಳೊಡ್ಡಿದ್ದಾರೆ. ಈ ಹಿಂದೆ ದೋಹಾ ಡೈಮಂಡ್ ಲೀಗ್‌ನಲ್ಲಿ ಗೆದ್ದಿದ್ದ ನೀರಜ್ ಚೋಪ್ರಾ, ಡೈಮಂಡ್ ಲೀಗ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್‌ಗೂ ಮುನ್ನ ಟೀಮ್ ಇಂಡಿಯಾಕ್ಕೆ ಟಿ20 ಪಂದ್ಯ- ಆಗಸ್ಟ್‌ನಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಕಣಕ್ಕಿಳಿಯಲಿದೆ ಭಾರತ

89.04 ಮೀ. ಜಾವೆಲಿನ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದು, ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ನೀರಜ್ ಪಾತ್ರರಾಗಿದ್ದರು. ಜರ್ಮನಿಯ ಜೂಲಿಯನ್ ವೆಬರ್ ಮತ್ತು ಜಕುಬ್ ವಡ್ಲೆಜ್ ತಮ್ಮ ಅಂತಿಮ ಪ್ರಯತ್ನಗಳಲ್ಲಿ ಕ್ರಮವಾಗಿ 87.03 ಮೀ ಹಾಗೂ 86.13 ಮೀ ದಾಖಲಿಸಿ 2 ಮತ್ತು 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಒಲಿಂಪಿಕ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.

ಸ್ನಾಯು ಸೆಳೆತ ಕಾರಣದಿಂದಾಗಿ ನೀರಜ್ ಚೋಪ್ರಾ, ಕಳೆದ ಜೂನ್ 4ರಂದು ನೆದರ್ಲ್ಯಾಂಡ್‌ನ ಹೆಂಗೆಲೋದಲ್ಲಿ ನಡೆದ ಎಫ್‌ಬಿಕೆ ಗೇಮ್ಸ್ ಮತ್ತು ಜೂನ್ 13ರಂದು ಫಿನ್‌ಲ್ಯಾಂಡ್‌ನ ತುರ್ಕುದಲ್ಲಿ ನಡೆದ ಪಾವೊ ನೂರ್ಮಿ ಗೇಮ್‌ನಿಂದಲೂ ಅವರು ಹೊರಗುಳಿಯಬೇಕಾಗಿತ್ತು. ಗಾಯದ ಸಮಸ್ಯೆಯಿಂದ ಯಾವುದೇ ಟೂರ್ನಿಯಲ್ಲಿ ಪಾಲ್ಗೊಳ್ಳದೇ ವಿಶ್ರಾಂತಿಯಲ್ಲಿದ್ದ ನೀರಜ್ ಇದೀಗ ಡೈಮಂಡ್ ಲೀಗ್ ಮೂಲಕ ಕಂಬ್ಯಾಕ್ ಮಾಡಿದ್ದಾರೆ. 89.04 ಮೀ. ಜಾವೆಲಿನ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದು, ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ನೀರಜ್ ಪಾತ್ರರಾಗಿದ್ದರು.

suddiyaana