ಸಿಲಿಕಾನ್ ಸಿಟಿ ಮಂದಿಗೆ ಗುಡ್ನ್ಯೂಸ್! – ನಾಳೆಯಿಂದ ಯೆಲ್ಲೋ ಲೈನ್ನಲ್ಲಿ 15 ನಿಮಿಷಕ್ಕೊಂದು ರೈಲು ಸಂಚಾರ
ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಗುಡ್ನ್ಯೂಸ್ವೊಂದಿದೆ. ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಳೆಯಿಂದ ಐದನೇ ಸೆಟ್ ರೈಲು ಓಡಾಟ ಆರಂಭಿಸಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಇದನ್ನೂ ಓದಿ: ಬೆಂಕಿಯಲ್ಲಿ ಕಾಯಿಸಿದ ಚಾಕುವಿನಿಂದ ಮಗುವಿನ ಮುಖಕ್ಕೆ ಬರೆ ಎಳೆದ ಅಂಗನವಾಡಿ ಸಹಾಯಕಿ! – ಕಾರಣವೇನು ಗೊತ್ತಾ?
ಕರ್ನಾಟಕ ರಾಜ್ಯೋತ್ಸವದ 70ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ನವೆಂಬರ್ 1ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ. ನಾಳೆ ಬೆಳಗ್ಗೆ 5 ಗಂಟೆಗೆ 5ನೇ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ. ಹೊಸ ರೈಲು ಸಂಚಾರದಿಂದ ಪ್ರಯಾಣಿಕರ ಕಾಯುವಿಕೆ 20 ನಿಮಿಷದಿಂದ 15 ನಿಮಿಷಕ್ಕೆ ಇಳಿಕೆಯಾಗಲಿದೆ. ಈ ಮೂಲಕ ಪೀಕ್ ಅವರ್ನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಈಗಾಗಲೇ ಐದನೇ ರೈಲಿನ ಪರೀಕ್ಷೆ ಮುಗಿದಿದ್ದು, ಕೊನೆಯ ಹಂತದ ತಾಂತ್ರಿಕ ಪರೀಕ್ಷೆ ಕಾರ್ಯ ಮುಕ್ತಾಯ ಹಂತದಲ್ಲಿದೆ. ಈ ಮೂಲಕ ಐದನೇ ರೈಲು ನಾಳೆಯಿಂದ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ.
ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಮಾರ್ಗದಲ್ಲಿ ಕೊನೆಯ ರೈಲು ರಾತ್ರಿ 11 ಗಂಟೆಗೆ ಸಂಚಾರ ಮಾಡಲಿದೆ. ಪ್ರಯಾಣಿಕರು ಈ ಬದಲಾವಣೆಯನ್ನು ಗಮನಿಸಿ. ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಬಿಎಂಆರ್ಸಿಎಲ್ವಿನಂತಿಸಿದೆ.

ನೋಡಿರಿ

