ಆರ್‌ಸಿಬಿ ಫ್ಯಾನ್ಸ್‌ಗೆ ಖುಷಿ ಸುದ್ದಿ! – ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಮ್ಯಾಚ್ ನಡೆಸಲು ಗ್ರೀನ್ ಸಿಗ್ನಲ್!

ಜೂನ್ 4.. ಆರ್‌ಸಿಬಿ ಹಾಗೂ ಅಭಿಮಾನಿಗಳ ಪಾಲಿಗೆ ಕರಾಳ ದಿನ. ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ರು. ಈ ದುರಂತದ ಬಳಿಕ ಚಿನ್ನಸ್ವಾಮಿ ಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಪಂದ್ಯ ನಡೆದಿಲ್ಲ. ಐಪಿಎಲ್ ಸೀಸನ್ 19ರ ಪಂದ್ಯಗಳು ಕೂಡ ಚಿನ್ನಸ್ವಾಮಿಯಲ್ಲಿ ನಡೆಯಲ್ಲ ಎಂಬ ಮಾತು ಕೇಳಿಬಂದಿತ್ತು. ಇದೀಗ ಆರ್‌ಸಿಬಿ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಸಿಕ್ಕಿದೆ. ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇದನ್ನೂ ಓದಿ: 75ನೇ ವಸಂತಕ್ಕೆ ಕಾಲಿಟ್ಟ ತಲೈವಾ – ರಜನಿ ಪಾತ್ರಗಳು ಬೆಂಚ್‌ಮಾರ್ಕ್ ಸೃಷ್ಟಿಸಿವೆ ಎಂದ ಪ್ರಧಾನಿ ಮೋದಿ
ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದ್ರೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಪಂದ್ಯ ನಡೆಸುವ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗೃಹ ಇಲಾಖೆಯ ಮೂಲಕ, ಕುನ್ಹಾ ವರದಿ ಶಿಫಾರಸು ಪ್ರಕಾರ ಅನುಮತಿ ನೀಡಲು ಸಂಪುಟ ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ.
ಹೊಸ ಷರತ್ತುಗಳೊಂದಿಗೆ ಅನ್ವಯ ಈ ಬಗ್ಗೆ ಅಂತಿಮ ತಿರ್ಮಾನ ಕೈಗೊಳ್ಳಲು ಗೃಹ ಇಲಾಖೆಗೆ ಅಧಿಕಾರ ನೀಡಲಾಗಿದೆ. ಕುನ್ಹಾ ವರದಿಯಲ್ಲಿ ಸ್ಟೇಡಿಯಂ ಬಗ್ಗೆ ನೀಡಿರುವ ಸಲಹೆಗಳನ್ನ ಇಂಪ್ಲಿಮೆಂಟ್ ಮಾಡಬೇಕು ಎಂಬ ಷರತ್ತು ಆಧರಿಸಿ ಮ್ಯಾಚ್ ಆಡಿಸಲು ಸಹಮತ ಸಿಕ್ಕಿದೆ.
ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದ ಬಳಿಕ ಕ್ರೀಡಾಂಗಣದಲ್ಲಿ ಮ್ಯಾಚ್ಗಳನ್ನು ಸ್ಥಗಿತ ಮಾಡಲಾಗಿತ್ತು. ಇದೀಗ ಮತ್ತೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಮತಿ ಸಿಕ್ಕಿದ್ದು ಐಪಿಎಲ್ ಅಭಿಮಾನಿಗಳಿಗೆ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ.

ನೋಡಿರಿ

