ಶಾಲೆಗೆ ಹೊರಟ ವಿದ್ಯಾರ್ಥಿಗಳಿಗೆ KSRTCಯಿಂದ ಗುಡ್ ನ್ಯೂಸ್ – ಹಳೇ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ!

ಶಾಲೆಗೆ ಹೊರಟ ವಿದ್ಯಾರ್ಥಿಗಳಿಗೆ KSRTCಯಿಂದ ಗುಡ್ ನ್ಯೂಸ್ – ಹಳೇ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ!

ಬೇಸಿಗೆ ರಜೆ ಮುಗಿಸಿ ಮರಳಿ ಶಾಲೆಗೆ ಹೋಗಲು ರೆಡಿಯಾಗಿರುವ ವಿದ್ಯಾರ್ಥಿಗಳಿಗೆ ಸಾರಿಗೆ ನಿಗಮ ಗುಡ್ ನ್ಯೂಸ್ ನೀಡಿದೆ. 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ (Students Bus Pass) ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಬುಧವಾರ (ಮೇ 31) ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದೆ. ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.

ಇದನ್ನೂ ಓದಿ : ಮೊಬೈಲ್​ ಬಿದ್ದಿದ್ದಕ್ಕೆ ಡ್ಯಾಂ ನೀರನ್ನೇ ಖಾಲಿ ಮಾಡಿಸಿದ್ದ ಅಧಿಕಾರಿಗೆ 53,000 ರೂಪಾಯಿ ದಂಡ!

ವಿದ್ಯಾರ್ಥಿಯು ತಮ್ಮ ಈ ಹಿಂದಿನ ವರ್ಷದ ಬಸ್ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ. ಬೇಸಿಗೆ ರಜೆ ಅಂತ್ಯವಾಗಿದ್ದು, ರಾಜ್ಯಾದ್ಯಂತ ಶಾಲೆ ಪ್ರಾರಂಭವಾಗಿವೆ. ಇನ್ನು ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚನೆಗಳನ್ನು ನೀಡಿದೆ. ಪ್ರಾರಂಭೋತ್ಸವ ನಡೆಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ. ಒಂದು ವೇಳೆ ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಶಿಕ್ಷಣ ಇಲಾಖೆ ತನ್ನ ಸುತ್ತೋಲೆಯಲ್ಲಿ ಸೂಚಿಸಿದೆ.

suddiyaana