ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ – ಭಾನುವಾರ ಮೆಟ್ರೋ ಸೇವೆ ವಿಸ್ತರಣೆ
ಬೆಂಗಳೂರು ಮೆಟ್ರೋ ರೈಲು ನಿಗಮವು ಹಬ್ಬಗಳು ಸೇರಿದಂತೆ ವಿಶೇಷ ಕಾರ್ಯಕ್ರಮಗಳ ಸಮದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ತಡೆಯುವ ಉದ್ದೇಶದಿಂದ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಣೆ ಮಾಡುತ್ತಲೇ ಬಂದಿದೆ. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸೆಂಬರ್ 3 ರಂದು ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮೆಟ್ರೋ ಸೇವೆಯನ್ನು ವಿಸ್ತರಿಸಿದೆ.
ಇದನ್ನೂ ಓದಿ: ನಕಲಿ ಇ-ಮೇಲ್ ಐಡಿ ಬಳಸಿ ಬಾಂಬ್ ಬೆದರಿಕೆ – ಶಾಲೆಗಳ ಇಮೇಲ್, ದತ್ತಾಂಶ ಸೋರಿಕೆಯಾಗಿದ್ದು ಹೇಗೆ?
ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ಡಿಸೆಂಬರ್ 3ರಂದು ನಡೆಯಲಿದೆ. ಮ್ಯಾಚ್ ವೀಕ್ಷಿಸಲು ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಆಗಮಿಸುವ ನಿರೀಕ್ಷೆಯಿದೆ. ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಭಾನುವಾರ ಮೆಟ್ರೋ ಸೇವೆಯನ್ನು ವಿಸ್ತರಿಸಿದೆ. ನೇರಳೆ ಹಾಗೂ ಹಸಿರು ಮಾರ್ಗಗಳ 4 ಟರ್ಮಿನಲ್ ಮೆಟ್ರೋ ನಿಲ್ದಾಣದಿಂದ ಹೊರಡುವ ರೈಲು ರಾತ್ರಿ 11.45ರ ವರೆಗೆ ಇರಲಿದೆ. ರಿಟರ್ನ್ ಜರ್ನಿ ಟಿಕೆಟ್‌ಗಳು ಭಾನುವಾರ ಮಧ್ಯಾಹ್ನ 2 ಗಂಟೆಯಿಂದಲೇ ಲಭ್ಯ ಇರಲಿದೆ.
ಇನ್ನೂ ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಹಾಗೂ ಎಂ.ಜಿ ರೋಡ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ದಿನದ ಒಂದು ಪ್ರಯಾಣಕ್ಕೆ ಸೀಮಿತವಾಗಿರಲಿದೆ. ಪೇಪರ್ ಟಿಕೆಟ್ ದರ 50 ರೂ. ಇರಲಿದೆ ಎಂದು ಮೆಟ್ರೋ ಆಡಳಿತ ಮಂಡಳಿ ತಿಳಿಸಿದೆ.