ಗೂಡ್ಸ್‌ ರೈಲು ಡಿಕ್ಕಿ ಹೊಡೆದು 17 ಎಮ್ಮೆ ಸೇರಿ 20 ಜಾನುವಾರುಗಳು ಸಾವು

ಗೂಡ್ಸ್‌ ರೈಲು ಡಿಕ್ಕಿ ಹೊಡೆದು 17 ಎಮ್ಮೆ ಸೇರಿ 20 ಜಾನುವಾರುಗಳು ಸಾವು

ಮಂಗಳೂರು:‌ ಸರಕು ಸಾಗಣೆಯ ರೈಲು ಡಿಕ್ಕಿ ಹೊಡೆದು ಸುಮಾರು 17 ಎಮ್ಮೆ ಸೇರಿ 20 ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ.

ಸೋಮವಾರ ಮುಂಜಾನೆ 5 ಗಂಟೆ ವೇಳೆಗೆ ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು. ಈ ವೇಳೆ ಗೂಡ್ಸ್‌ ರೈಲು ನಿಧಾನವಾಗಿ ಚಲಿಸಲು ಪ್ರಾರಂಭವಾಗಿದೆ. ಈ ವೇಳೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ ವೇಳೆ ಎಮ್ಮೆಗಳು ಸತ್ತಿರುವುದು ಕಂಡುಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಕ್​ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತ – 6 ಮಂದಿ ಸಾವು, 25 ಜನರಿಗೆ ಗಾಯ

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರಿನ ಕದ್ರಿ ಅಗ್ನಿಶಾಮಕದಳದ ಸಿಬ್ಬಂದಿ ಸುಮಾರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ಹಳಿಗಳ ಬಳಿ ಇದ್ದ ಎಮ್ಮೆಗಳ ಮೃತದೇಹಗಳನ್ನು ತೆರವು ಮಾಡಿದ್ದಾರೆ. ನಾಲ್ಕು ಎಮ್ಮೆಗಳನ್ನು ರಕ್ಷಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

2021ರಲ್ಲೂ ತೋಕೂರಿನಲ್ಲಿ ಇದೇ ರೀತಿ ಅವಘಡ ಸಂಭವಿಸಿತ್ತು. 13 ಎಮ್ಮೆಗಳು ಸತ್ತಿದ್ದವು. ಶನಿವಾರ ಈ ಪ್ರದೇಶದಲ್ಲಿ ಭಾರಿ ಮಳೆಯಾದ ಕಾರಣ ರೈಲು ಹಳಿ ಬಳಿ ಕೆಸರು ನೀರು ನಿಂತಿತ್ತು. ಎಮ್ಮೆಗಳು ಕೆಸರಿನ ಬಳಿ ಮಲಗುತ್ತವೆ. ಬಹುಶಃ ಎಮ್ಮೆಗಳು ಹಳಿಯ ಮೇಲೆ ಮಲಗಿದ್ದಾಗ ರೈಲು ಹಾದುಹೋಗಿರಬಹುದು ಎಂದು ರೈಲ್ವೇ ಅಧಿಕಾರಿಗಳು ಹೇಳಿದ್ದಾರೆ.

suddiyaana