ಬಿಜೆಪಿ ಟಿಕೆಟ್ ಕೈ ತಪ್ಪಿದ ಸಿಟ್ಟು- ಆರ್.ಶಂಕರ್, ಗೂಳಿಹಟ್ಟಿ ಮುಂದಿನ ನಡೆ ಏನು?

ಬಿಜೆಪಿ ಟಿಕೆಟ್ ಕೈ ತಪ್ಪಿದ ಸಿಟ್ಟು- ಆರ್.ಶಂಕರ್, ಗೂಳಿಹಟ್ಟಿ ಮುಂದಿನ ನಡೆ ಏನು?

ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಲಾಗಿದೆ. ಟಿಕೆಟ್ ಸಿಗದೆ ಹತಾಶೆಗೊಂಡಿರುವ ಕೆಲ ನಾಯಕರು ಹೈಕಮಾಂಡ್ ಮತ್ತು ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸದುರ್ಗ ಕ್ಷೇತ್ರದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್​ಗೂ ಕೂಡ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಹೀಗಾಗಿ ಗೂಳಿಹಟ್ಟಿ ಶೇಖರ್ ಜನಾರ್ಧನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ರೆಡ್ಡಿ ನಿವಾಸಕ್ಕೆ ತೆರಳಿ ಗೂಳಿಹಟ್ಟಿ ಶೇಖರ್ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಹೀಗಾಗಿ ಗೂಳಿಹಟ್ಟಿ ಶೇಖರ್ ಕೆಆರ್ ಪಿಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇದನ್ನೂ ಓದಿ : ಅಂಗಾರ ರಾಜಕೀಯ ನಿವೃತ್ತಿ.. ರಘುಪತಿ ಭಟ್ ಕಣ್ಣೀರು – ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಭಿನ್ನಮತ!

ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಆರ್.ಶಂಕರ್ ಕೂಡ ಸಿಡಿದೆದ್ದಿದ್ದು, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣೇಬೆನ್ನೂರು ಕ್ಷೇತ್ರದಿಂದ ಶಾಸಕ ಅರುಣ್ ಕುಮಾರ್​ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕಾಂಗ್ರೆಸ್, ಬಿಜೆಪಿ ಟಿಕೆಟ್ ಇಲ್ಲದೆ ಅಡಕತ್ತರಿಯಲ್ಲಿ ಸಿಲುಕಿರುವ ಆರ್ ಶಂಕರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾವು ಬಿಜೆಪಿಯನ್ನು ಅಧಿಕಾರಕ್ಕೆ ತಂದೋರು, ನಮಗೆಲ್ಲ ಮೋಸ ಮಾಡಿದ್ರು ಎಂದು ಅಸಮಾಧಾನ ಹೊರ ಹಾಕಿದ್ದಾರೆ.   ಕಲಬುರಗಿ ಜಿಲ್ಲೆಯ ಜೇವರ್ಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ದೊಡ್ಡನಗೌಡ ಪಾಟೀಲ್ ಕೂಡ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

suddiyaana