ಯುದ್ಧ ಪೀಡಿತ ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ʼಅಪರೇಷನ್ ಅಜಯ್ʼ ಆರಂಭಿಸಿದ ಕೇಂದ್ರ ಸರ್ಕಾರ

ಯುದ್ಧ ಪೀಡಿತ ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ʼಅಪರೇಷನ್ ಅಜಯ್ʼ ಆರಂಭಿಸಿದ ಕೇಂದ್ರ ಸರ್ಕಾರ

ಇಸ್ರೇಲ್​ ಮತ್ತು ಹಮಾಸ್ ಉಗ್ರರ ನಡುವಿನ ಮಹಾಯುದ್ಧ ಮುಂದುವರೆದಿದೆ. ಒಂದೆಡೆ ಇಸ್ರೇಲ್​​ ಗಾಜಾದ ಮೇಲೆ ನಿರಂತರ ವೈಮಾನಿಕ ದಾಳಿ ನಡೆಸ್ತಾ ಇದ್ರೆ, ಮತ್ತೊಂದೆಡೆ ಹಮಾಸ್ ಉಗ್ರರು ಕೂಡ ಮಿಸೈಲ್​​ ಅಟ್ಯಾಕ್ ಮಾಡ್ತಿದ್ದಾರೆ. ಈ ಯುದ್ಧದಲ್ಲಿ ಇದುವರೆಗೂ 3500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇಸ್ರೇಲ್‍ನಲ್ಲಿ ಬರೋಬ್ಬರಿ 18,000 ಮಂದಿ ಭಾರತೀಯರಿದ್ದಾರೆ. ಯುದ್ಧ ಪೀಡಿತ ಪ್ರದೇಶಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಹೆಸರಿನಲ್ಲಿ ವಿಶೇಷ ವಿಮಾನಗಳನ್ನು ಕಳಿಸಿಕೊಡಲು ಸಿದ್ಧತೆ ನಡೆಸಿದೆ.

ಇದನ್ನೂ ಓದಿ: ತೆರಿಗೆ ವಂಚನೆ ಕೇಸ್‌  – ರಾಜ್ಯ ರಾಜಧಾನಿಯಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಈ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಟ್ವೀಟ್‌ ಮಾಡಿದ್ದು, ಇಸ್ರೇಲ್‍ನಲ್ಲಿ 18,000 ಭಾರತೀಯರಿದ್ದಾರೆ. ಅವರನ್ನು ಕರೆತರಲು ವಿಶೇಷ ಚಾರ್ಟರ್ ಫ್ಲೈಟ್‍ಗಳನ್ನು ಕಳಿಸಲಾಗುವುದು. ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಭಾರತಕ್ಕೆ ಹಿಂದಿರುಗಲು ಮೊದಲು ನೋಂದಾಯಿಸಿದ ಭಾರತೀಯರಿಗೆ ಸೂಚನೆ ನೀಡಲಾಗಿದೆ. ಶುಕ್ರವಾರ ಭಾರತಕ್ಕೆ ಮೊದಲ ವಿಶೇಷ ವಿಮಾನದಲ್ಲಿ ಅವರನ್ನು ಕಳಿಸಲಾಗುವುದು. ಅಲ್ಲದೇ ನೋಂದಾಯಿತರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ ಎಂದು ಇಸ್ರೇಲ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.

Shwetha M