ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ – ದೆಹಲಿಯಿಂದ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಭೇಟಿ

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ – ದೆಹಲಿಯಿಂದ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಭೇಟಿ

ಮುಡಾ ಹಗರಣದಿಂದಾಗಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಪ್ರಕರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್​ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾರಿನಲ್ಲಿ ಎಸಿ ಹಾಕಿ ಮಲಗೋ ಮುನ್ನ ಎಚ್ಚರ! – ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ಅಕ್ರಮವಾಗಿ ಸಿಎಂ ಪತ್ನಿಯವರಿಗೆ 14 ಸೈಟ್​ಗಳನ್ನು ನೀಡಲಾಗಿರುವ ವಿಚಾರದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯರ ಕೈಬಿಡಬಾರದು ಎಂದು ಹಠ ತೊಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರಿಗೆ ಈಗಾಗಲೇ ಅದರ ಬಗ್ಗೆ ಸ್ಪಷ್ಟ ಸಂದೇಶ ನೀಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್​ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ದೆಹಲಿಯಿಂದ ಪ್ರಯಾಣ ಬೆಳಸಿರುವ ಮಲ್ಲಿಕಾರ್ಜುನ ಖರ್ಗೆ, ಕೆಲ ಹೊತ್ತಿನಲ್ಲಿಯೇ ತಮ್ಮ ಸದಾಶಿವನಗರದ ನಿವಾಸಕ್ಕೆ ಆಗಮಿಸಲಿದ್ದಾರೆ. ಅಲ್ಲಿ ರಾಜ್ಯ ನಾಯಕರೊಂದಿಗೆ ಮುಂದಿನ ಹೋರಾಟದ ರೂಪುರೇಷೆಗಳು ಸಿದ್ದಗೊಳ್ಳುವ ಸಾಧ್ಯತೆ ಇದೆ

Shwetha M