ಮುಡಾ ಕೇಸ್ ಗೆ ಬಿಗ್ ಟ್ವಿಸ್ಟ್ – ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ
ಮುಡಾ ಭ್ರಷ್ಟಾಚಾರ ಪ್ರಕರಣ ಸದ್ಯ ರಾಜ್ಯ ರಾಜಕೀಯದದಲ್ಲಿ ಭಾರಿ ಸದ್ದು ಮಾಡುತ್ತಿದೆ. ಆರೋಪ ಪ್ರತ್ಯಾರೋಪ ನಡೆಯುತ್ತಲೇ ಇದೆ. ಒಂದೆಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಮುಡಾ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖಾ ಹಂತದಲ್ಲಿ ತನಿಖೆ ನಡೆಸಲಾಗಿದ್ದು, ಸಲ್ಲಿದ್ದಲದೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಇದನ್ನೂ ಓದಿ: ಪನೀರ್ ಅಂದ್ರೆ ಪ್ರಾಣಕ್ಕೆ ಸಂಚಕಾರ! – ನೀವು ತಿನ್ನೋ ಪನೀರ್ ಅಸಲಿಯೋ.. ನಕಲಿಯೋ?
ಮುಡಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ನೇತೃತ್ವದಲ್ಲಿ ಇಲಾಖೆ ಮಟ್ಟದಲ್ಲಿ ತನಿಖೆ ನಡೆಸಲಾಗಿತ್ತು. ಬಳಿಕ ಆ ವರದಿಯನ್ನ ಇಲಾಖೆಗೆ ಸಲ್ಲಿಸಲಾಗಿತ್ತು. ಈ ವರದಿಯಲ್ಲಿ 8 ಪ್ರಕರಣಗಳಲ್ಲಿ ಬದಲಿ ನಿವೇಶನ ಹಂಚಿಕೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಎಂಬುದು ಸಾಕ್ಷಿ ಸಮೇತ ಸಾಭೀತಾಗಿದೆ. ಇದರಿಂದ ಮುಡಾಗೆ ಹಾಗೂ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನಷ್ಟ ಉಂಟಾಗಿದೆ, ದಿನೇಶ್ ಕುಮಾರ್ ಅವರು ಮುಡಾ ಆಯುಕ್ತರಾಗಿದ್ದ ಸಂದರ್ಭದಲ್ಲಿ ಈ ನಷ್ಟ ಉಂಟಾಗಿದೆ ಎಂಬ ಅಂಶಗಳನ್ನ ಉಲ್ಲೇಖ ಮಾಡಲಾಗಿದೆ. ವರಧಿಯನ್ನಾಧರಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ದಿನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ತನಿಖಾ ವರದಿಯನ್ನಾಧಿರಿ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ಕೊಟ್ಟಿರುವ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ, ವರದಿಯಲ್ಲಿ ಉಲ್ಲೇಖವಾಗಿರುವ ಎಲ್ಲಾ ಹಂತದ ಅಧಿಕಾರಿಗಳ ಸಂಪೂರ್ಣ ಮಾಹಿತಿ ಕೊಡಬೇಕು. ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟದ ಬಗ್ಗೆ ಅಂದಾಜು ವಿವರ ಸಲ್ಲಿಸಬೇಕು. ಆ ಎಲ್ಲಾ ಕಡತಗಳ ದೃಢೀಕೃತ ಆದೇಶ ಪ್ರತಿಗಳನ್ನ ನೀಡಬೇಕೆಂದು ನೋಟೀಸ್‌ನಲ್ಲಿ ಉಲ್ಲೇಖಿಸಿದ್ದಾರೆ.
ಈ ವಿಚಾರದಲ್ಲಿ ಯಾವುದೇ ಒಬ್ಬ ನೌಕರನನ್ನ ಪ್ರಕರಣದಿಂದ ಹೊರಗುಳಿಯಲು ಆಸ್ಪದ ಕೊಟ್ಟಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆಂದು ಇಂದಿನ ಆಯುಕ್ತರಿಗೆ ಎಚ್ಚರಿಕೆ ಸಹ ಕೊಟ್ಟಿದ್ದಾರೆ. ಈ ಕುರಿತು ಇಂದಿನ ಆಯುಕ್ತರಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಬರೆದಿರುವ ಸುತ್ತೋಲೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.