ಆನೆ ಮೇಲೆ ಅಂಬಾರಿ.. ಅಂಬಾರಿಯೊಳಗೆ ಗಣಪತಿ! – ಇದು ಜಂಬೂ ಸವಾರಿಯಲ್ಲ.. ಗಣಪತಿ ಮೆರವಣಿಗೆ!

ಗಣೇಶ ಚತುರ್ಥಿ ಹಬ್ಬವನ್ನ ದೇಶದಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದೆ. ವಿವಿಧ ಭಂಗಿಯಲ್ಲಿ ಕುಳಿತ ವಿಘ್ನ ನಿವಾರಕ ಗಣೇಶನ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಇದೀಗ ಇಲ್ಲೊಂದು ಕಡೆ ಗಣೇಶನನ್ನ ಅಂಬಾರಿ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗಿದೆ. ಇದ್ರ ಫೋಟೋ, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ನಟಿ ಪವಿತ್ರಾ ಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!
ಹೌದು, ದೊಡ್ಡಬಳ್ಳಾಪುರದ ತೂಬಗೆರೆ ಗ್ರಾಮದಲ್ಲಿ ಗ್ರಾಮಸ್ಥರು ಗಣೇಶನನ್ನು ಆನೆಯ ಮೇಲೆ ಅಂಬಾರಿಯ ಅಲಂಕಾರ ಮಾಡಿ ಮೆರವಣಿಗೆ ಮಾಡಿ ವಿಸರ್ಜನೆ ಮಾಡಿದ್ದಾರೆ. ನಾಡಹಬ್ಬ ದಸರಾ ಮಾದರಿಯಲ್ಲಿಯೇ ಗಣೇಶನ ಮೆರವಣಿಗೆ ಮಾಡಲಾಗಿದೆ.
ಗ್ರಾಮದ ಚಾವಡಿ ಗಣೇಶೋತ್ಸವ ಸಮಿತಿಯವರು ಇದೇ ಮೊದಲ ಬಾರಿಗೆ ಅಂಬಾರಿ ಗಣೇಶನ ಮೆರವಣಿಗೆ ಆಯೋಜನೆ ಮಾಡಿದ್ದು, ಜನರ ಗಮನ ಸೆಳೆಯಿತು. ದಸರಾ ಆನೆಯಂತೆ ಅಲಂಕೃತಗೊಂಡು ಸಿಂಗಾರಗೊಂಡಿದ್ದ ಲಕ್ಷ್ಮೀ ಹೆಸರಿನ ಆನೆಯ ಮೇಲೆ ಅಂಬಾರಿಯಲ್ಲಿ ಗಣೇಶನನ್ನು ಕೂರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಆನೆಯ ಮೆರವಣಿಗೆಯೊಂದಿಗೆ, ನಾದಸ್ವರದ ಮೇಳ, ಡೊಳ್ಳು-ಕುಣಿತ, ಜಾನಪದ ತಂಡಗಳ ಸೊಗಸು ಎಲ್ಲವೂ ಸೇರಿ ದಸರಾ ವೈಭವವದ ಕಳೆಯನ್ನು ತಂದಿತ್ತು. ಇದ್ರ ಫೋಟೋ, ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೋಡಿರಿ

