ಭಾರತ್‌ ಜೋಡೋ ಯಾತ್ರೆ ವೇಳೆ ದಣಿದಿದ್ದ ರಾಹುಲ್‌ ಗಾಂಧಿಗೆ ಸೌತೆಕಾಯಿ ನೀಡಿದ್ದ ಅಜ್ಜಿ ನಿಧನ

ಭಾರತ್‌ ಜೋಡೋ ಯಾತ್ರೆ ವೇಳೆ ದಣಿದಿದ್ದ ರಾಹುಲ್‌ ಗಾಂಧಿಗೆ ಸೌತೆಕಾಯಿ ನೀಡಿದ್ದ ಅಜ್ಜಿ ನಿಧನ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆ ಮೂಲಕ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದ್ದರು. ಕರ್ನಾಟಕದ ಮೂಲಕ ಈ ಯಾತ್ರೆ ಸಾಗಿತ್ತು. ಭಾರತ್ ಜೋಡೋ ಯಾತ್ರೆ ವೇಳೆ ದಣಿದಿದ್ದ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿ ದಣಿವಾರಿಸಿದ್ದ ಅಜ್ಜಿಯೊಬ್ಬರು ನಿಧನರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ – ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್!

ತುಮಕೂರಿನಲ್ಲಿ ಚಿಕ್ಕನಾಯಕನಹಳ್ಳಿಯ ನಿವಾಸಿ ಶಾರದಮ್ಮ (78) ನಿಧನರಾದ ಅಜ್ಜಿ. 2022ರ ಅಕ್ಟೋಬರ್‌ನಲ್ಲಿ ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ಭಾರತ್ ಜೋಡೋ ಯಾತ್ರೆ ಹೊರಟಿದ್ದ ಸಂದರ್ಭ ರಾಹುಲ್ ಗಾಂಧಿಗೆ ಫುಟ್‌ಪಾತ್ ವ್ಯಾಪಾರಿಯಾಗಿದ್ದ ಈ ಅಜ್ಜಿ ಸೌತೆಕಾಯಿಯನ್ನು ನೀಡಿ ದಣಿವಾರಿಸಿದ್ದರು. ಇಷ್ಟು ಮಾತ್ರವಲ್ಲದೇ ರಾಹುಲ್ ಗಾಂಧಿ ಬಳಿ ಇಂದಿರಾಗಾಂಧಿಯನ್ನು ಶಾರದಮ್ಮ ಹೊಗಳಿದ್ದರು. ಇದರ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿತ್ತು.

ರಾಹುಲ್‌ ಗಾಂಧಿಗೆ ಸೌತೆಕಾಯಿ ನೀಡಿದ್ದ ಶಾರದಮ್ಮ  ಅನಾರೋಗ್ಯದ ಹಿನ್ನೆಲೆ ಸೋಮವಾರ ನಿಧನರಾಗಿದ್ದಾರೆ. ಶಾರದಮ್ಮ ಅಜ್ಜಿಯ ಅಂತ್ಯ ಸಂಸ್ಕಾರ ಚಿಕ್ಕನಾಯಕನ ಹಳ್ಳಿಯಲ್ಲಿ ನೆರವೇರಿದೆ.

Shwetha M