6,6,6,6,6 ಸಾಲ್ಟ್ ಸಿಡಿಲಬ್ಬರದ ಸಿಕ್ಸರ್ – ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ

6,6,6,6,6 ಸಾಲ್ಟ್ ಸಿಡಿಲಬ್ಬರದ ಸಿಕ್ಸರ್ – ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ

ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ, 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು. 181 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಪವರ್​ ಪ್ಲೇನಲ್ಲಿ 58 ರನ್ ಕಲೆಹಾಕಿದ ಈ ಜೋಡಿ ಬೃಹತ್ ಮೊತ್ತವನ್ನು ಚೇಸ್ ಮಾಡಲು ಅತ್ಯುತ್ತಮ ಅಡಿಪಾಯ ಹಾಕಿದರು. ಕೊನೆಗೂ ಇಂಗ್ಲೆಂಡ್ ತಂಡವು 17.3 ಓವರ್​ಗಳಲ್ಲಿ ಗುರಿ ತಲುಪಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಇದನ್ನೂ ಓದಿ:ಕಿಂಗ್ ಕೊಹ್ಲಿ ವಿರಾಟ್ ರೂಪಕ್ಕೆ ಕೌಂಟ್‌ಡೌನ್ – ಟೀಮ್ ಇಂಡಿಯಾಕ್ಕೆ ಅಫ್ಘಾನಿಸ್ತಾನ್ ತಂಡದಿಂದ ಗೂಗ್ಲಿ ಚಾಲೆಂಜ್

ಇಂಗ್ಲೆಂಡ್ ತಂಡವು ಸೂಪರ್-8 ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಲು ಕಾರಣ ಪಿಲ್ ಸಾಲ್ಟ್ ಅವರ ಸಿಡಿಲಬ್ಬರದ ಬ್ಯಾಟಿಂಗ್. ಟಿ20 ವಿಶ್ವಕಪ್​ನಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಫಿಲ್ ಸಾಲ್ಟ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಇಯಾನ್ ಮೋರ್ಗನ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಾಲ್ಟ್, 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್ ಸೇರಿ ಕೇವಲ 47 ಎಸೆತಗಳಲ್ಲಿ ಅಜೇಯ 87 ರನ್ ಬಾರಿಸಿದ್ರು. ಈ ಪಂದ್ಯದಲ್ಲಿ ಬಾರಿಸಿದ 5 ಭರ್ಜರಿ ಸಿಕ್ಸ್​ನೊಂದಿಗೆ ಇಂಗ್ಲೆಂಡ್ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಫಿಲ್ ಸಾಲ್ಟ್ ಪಾಲಾಗಿದೆ.

ಮೊದಲ ಸುತ್ತಿನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಇಂಗ್ಲೆಂಡ್ ತಂಡವು ನೆಟ್ ರನ್​ ರೇಟ್ ನೆರವಿನಿಂದ ದ್ವಿತೀಯ ಸುತ್ತು ಪ್ರವೇಶಿಸಿದೆ. ಆದರೀಗ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಅಮೋಘ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ದ್ವಿತೀಯ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿದ್ದಾರೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ಪಡೆ.

suddiyaana

Leave a Reply

Your email address will not be published. Required fields are marked *